ತೆಲಂಗಾಣ: ಮನೆಗೆ ಆಕಸ್ಮಿಕ ಬೆಂಕಿ, ನಿದ್ರೆಯಲ್ಲಿದ್ದ ಆರು ಮಂದಿ ಸಜೀವ ದಹನ
ತೆಲಂಗಾಣದ ಮಂಚಯಾರ್ಲದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬ ಆರು ಮಂದಿ ಸಜೀವ ದಹನವಾಗಿದ್ದಾರೆ.

ತೆಲಂಗಾಣ: ತೆಲಂಗಾಣದ ಮಂಚಯಾರ್ಲದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬ ಆರು ಮಂದಿ ಸಜೀವ ದಹನವಾಗಿದ್ದಾರೆ.
ಮದ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಮಾಲೀಕ ಸೇರಿ ಒಂದೇ ಕುಟುಂಬದ ಆರು ಜನ ಸಜೀವ ದಹನವಾಗಿದ್ದಾರೆ. ಈ ಬೆಂಕಿ ಅವಘಡದಲ್ಲಿ ಮನೆ ಯಜಮಾನ ಶಿವಯ್ಯ (50), ಅವರ ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ ಮಗಳು ಮೌನಿಕಾ (23) ಮತ್ತು ಆಕೆಯ ಇಬ್ಬರು ಪುತ್ರಿಯರು ಹಾಗು ಸಂಬಂಧಿ ಶಾಂತಯ್ಯ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಮೃತರಲ್ಲಿ ಸಿಂಗರೇಣಿ ಉದ್ಯೋಗಿ ಶಾಂತಯ್ಯ ಕೂಡ ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಮನೆಯಲ್ಲಿದ್ದವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯಲ್ಲಿ ಹೊತ್ತಿದ್ದ ಬೆಂಕಿ ನೋಡಿ ಅಕ್ಕ ಪಕ್ಕದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಮನೆ ಸಂಪೂರ್ಣ ಭಸ್ಮವಾಗಿ, ಕುಟುಂಬಸ್ಥರೆಲ್ಲಾ ಸಜೀವದಹನವಾಗಿದ್ದರು.
ಪೊಲೀಸರು ರಕ್ಷಣಾ ಕ್ರಮ ಕೈಗೊಂಡಿದ್ದಾರೆ. ಡಿಸಿಪಿ ಅಖಿಲ್ ಮಹಾಜನ್ ದುರಂತದ ಹಿಂದಿರುವ ಕಾರಣಗಳ ಬಗ್ಗೆ ತಿಳಿಯಲು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


