ನಕಲಿ ಮದ್ಯ ದುರಂತ: ಬಿಹಾರದ ಇನ್ನೆರಡು ಜಿಲ್ಲೆಗಳಲ್ಲಿ ಮತ್ತೆ ಎಂಟು ಮಂದಿ ಸಾವು
ಮದ್ಯ ನಿಷೇಧಿಸಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ 30 ಜನರ ಸಾವಿಗೆ ಕಾರಣವಾದ ನಕಲಿ ಮದ್ಯ ದುರಂತದ ಬೆನ್ನಲ್ಲೇ, ಇನ್ನೆರಡು ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪಾಟ್ನಾ: ಮದ್ಯ ನಿಷೇಧಿಸಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ 30 ಜನರ ಸಾವಿಗೆ ಕಾರಣವಾದ ನಕಲಿ ಮದ್ಯ ದುರಂತದ ಬೆನ್ನಲ್ಲೇ, ಇನ್ನೆರಡು ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸರನ್‌ಗೆ ಹೊಂದಿಕೊಂಡಿರುವ ಸಿವಾನ್ ಜಿಲ್ಲೆಯಲ್ಲಿ ಆರು ಜನ ಸಾವನ್ನಪ್ಪಿದರೆ, ಬೇಗುಸರಾಯಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಈ ಮಧ್ಯೆ, ಸರನ್ ಜಿಲ್ಲೆಯಲ್ಲಿ ಅಕ್ರಮವಾಗಿ ತಯಾರಿಸಿದ ಹಳ್ಳಿಗಾಡಿನ ಮದ್ಯವನ್ನು ಸೇವಿಸಿ ಸುಮಾರು 60 ಜನ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.
ಇದನ್ನು ಓದಿ: ಬಿಹಾರ: ನಕಲಿ ಮದ್ಯ ಸೇವನೆ, ಮೃತರ ಸಂಖ್ಯೆ 50ಕ್ಕೆ ಏರಿಕೆ
ಸಿವಾನ್ ಜಿಲ್ಲೆಯ ಭಗವಾನ್‌ಪುರ ವಿಭಾಗದಲ್ಲಿ ಸಂಭವಿಸಿದ ಆರು ಸಾವುಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ. ಅಲ್ಲದೆ "ಮದ್ಯ ಮಾರಾಟ ಮತ್ತು ಖರೀದಿಯಲ್ಲಿ ತೊಡಗಿರುವವರನ್ನು ಬಂಧಿಸಲು ನಾವು ಶೋಧ ನಡೆಸುತ್ತಿದ್ದೇವೆ" ಎಂದು ಕುಮಾರ್ ಹೇಳಿದ್ದಾರೆ.
ಇನ್ನು ಬೇಗುಸರಿ ಘಟನೆಯ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಮೋಹನ್ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ, ಶುಕ್ರವಾರ ತೇಘ್ರಾ ವಿಭಾಗದಲ್ಲಿ "ಕೆಲವು ವಿಷಕಾರಿ ರಾಸಾಯನಿಕ" ಸೇವಿಸಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. "ನಾವು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ತನಿಖೆ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


