ಇದು ನೆಹರೂ ಭಾರತವಲ್ಲ, ಮೋದಿ ಭಾರತ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ಮೋದಿಯವರ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಿದ್ರಿಸುತ್ತಿದೆ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿಗೆ ಶನಿವಾರ ತಿರುಗೇಚು ನೀಡಿದೆ.

ನವದೆಹಲಿ: ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ಮೋದಿಯವರ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಿದ್ರಿಸುತ್ತಿದೆ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿಗೆ ಶನಿವಾರ ತಿರುಗೇಚು ನೀಡಿದೆ.
ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ತಿರುಗೇಟು ನೀಡಿದ್ದು, ಇದು ನೆಹರೂ ಭಾರತವಲ್ಲ, ಮೋದಿ ಭಾರತ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ತಾತ ಮಲಗಿದ್ದರು. ಅವರು ನಿದ್ದೆ ಮಾಡುವಾಗ ಭಾರತದ 37 ಸಾವಿರ ಚದರ ಕಿ.ಮೀ. ಪ್ರದೇಶ ಚೀನಾ ಪಾಲಾಗಿತ್ತು. ಆ ನಂತರ ರಾಹುಲ್ ಗಾಂಧಿ ಚೀನಾದೊಂದಿಗೆ ಸ್ನೇಹ ಬೆಳೆಸಬೇಕು ಎಂದು ಭಾವಿಸಿದ್ದರು. ಈಗ ಸ್ನೇಹವು ಅದೆಷ್ಟು ಆಳವಾಗಿದೆ ಎಂದರೆ, ಚೀನಾ ಏನು ಮಾಡುತ್ತಿದೆ ಎಂಬುದು ಅವರಿಗೆ ಮೊದಲೇ ಗೊತ್ತಿದೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾದ ಕಮ್ಯುನಿಸ್ಟ್ ಪಕ್ಷದಿಂದ 1.35 ಕೋಟಿ ರೂ. ದೇಣಿಗೆ ಸ್ವೀಕರಿಸಿತ್ತು. ಆದರೆ, ಈಗ ಮೊದಲಿನಂತಿಲ್ಲ, ಭಾರತ ಬದಲಾಗಿದೆ. ಇದು ನೆಹರೂ ಭಾರತ ಅಲ್ಲ.. ಮೋದಿ ಭಾರತ ಎಂದು ತಿಳಿಸಿದ್ದಾರೆ.
ಇಂದು ದೇಶವನ್ನು ರಕ್ಷಿಸಲು ಸೇನೆಗೆ ಮುಕ್ತ ಅವಕಾಶವಿದೆ. ನಮ್ಮ ಸೈನ್ಯವು ಆಕ್ರಮಣ ನಡೆಸಿದರೆ ಸುಮ್ಮನಿರಲ್ಲ. 2014ರ ಬಳಿಕ ನಮ್ಮ ಸೈನ್ಯ ಗಡಿಯ ಭದ್ರತೆಯನ್ನು ಬಹಳ ಕಟ್ಟುನಿಟ್ಟಿನಿಂದ ಮಾಡುತ್ತಿದೆ. ಸರ್ಕಾರ ಸೈನ್ಯಕ್ಕೆ ಸಂಪೂರ್ಣ ಅವಕಾಶ ನೀಡುತ್ತಿದೆ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‍ನಲ್ಲಿ ಉಭಯ ದೇಶಗಳ ಸೈನಿಕರು ಕಾದಾಡಿದ ಬಳಿಕ ಈ ಬಗ್ಗೆ ಆತಂಕ ಮೂಡುತ್ತಿದೆ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಇದು ಅತಿಕ್ರಮಣಕ್ಕೆ ಅಲ್ಲ, ಯುದ್ಧಕ್ಕಾಗಿ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಿದ್ದರು.
ಈಗಾಗಲೇ ಚೀನಾ ಬಳಿ ಇರುವ ಅಸ್ತ್ರಗಳ ಮಾದರಿ ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಆದರೆ ಇದನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ನಮ್ಮ ಸರ್ಕಾರ ಯುದ್ಧ ಸನ್ನಿವೇಶವನ್ನು ಅಲ್ಲಗಳೆಯುತ್ತಿದೆ. ಇದನ್ನು ಮುಚ್ಚಿಟ್ಟು ಪ್ರಯೋಜನವಿಲ್ಲ ಎಂದು ಟೀಕಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


