"ನಾವು ನಮ್ಮ ಪ್ರಧಾನಿ ಬೆಂಬಲಕ್ಕೆ ನಿಲ್ಲುತ್ತೇವೆ": ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿದ ಭೂಪೇಶ್ ಬಘೇಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, "ನಾವೆಲ್ಲರೂ ನಮ್ಮ ಪ್ರಧಾನಿಯ ಬೆಂಬಲಕ್ಕೆ...

ರಾಯಪುರ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, "ನಾವೆಲ್ಲರೂ ನಮ್ಮ ಪ್ರಧಾನಿಯ ಬೆಂಬಲಕ್ಕೆ ನಿಲ್ಲುತ್ತೇವೆ" ಎಂದು ಹೇಳಿದ್ದಾರೆ.
ಪಾಕಿಸ್ತಾನ ಸಚಿವರ ಹೇಳಿಕೆಗೆ ಭಾರತ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಘೇಲ್ ಒತ್ತಾಯಿಸಿದ್ದಾರೆ.
"ಬಿಲಾವಲ್ ಭುಟ್ಟೊ ಒಬ್ಬ ಚಿಕ್ಕ ಹುಡುಗ, ಪ್ರಧಾನಿ ಮೋದಿ ವಿರುದ್ಧದ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ, ನಮ್ಮ ಪ್ರಧಾನಿ ಬಗ್ಗೆ ಈ ರೀತಿ ಮಾತನಾಡುವುದನ್ನು ಸಹಿಸುವುದಿಲ್ಲ. ಇದಕ್ಕೆ ಭಾರತ ತಕ್ಕ ಉತ್ತರ ನೀಡಬೇಕು. ಬೇರೆ ಯಾವುದೋ ದೇಶದ ನಾಯಕರು ನಮ್ಮ ಬಗ್ಗೆ ಹೇಗೆ ಮಾತನಾಡುತ್ತಾರೆ. ಇದಕ್ಕೆ ರಾಜಕೀಯ ಅಥವಾ ರಾಜತಾಂತ್ರಿಕವಾಗಿ ಉತ್ತರಿಸಬೇಕು. ನಾವೆಲ್ಲರೂ ನಮ್ಮ ಪ್ರಧಾನಿಯೊಂದಿಗೆ ನಿಲ್ಲುತ್ತೇವೆ, ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
"ನಾವು ನಮ್ಮ ರಾಜಕೀಯ ಸಿದ್ಧಾಂತವನ್ನು ಹೊಂದಿದ್ದೇವೆ, ಅದಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ರಾಷ್ಟ್ರದ ವಿಷಯಕ್ಕೆ ಬಂದಾಗ, ದೇಶದ ಪ್ರಧಾನಿ ನಮ್ಮೆಲ್ಲರ ಪ್ರಧಾನಿಯಾಗಿದ್ದಾರೆ. ಅವರ ಗೌರವಕ್ಕೆ ಧಕ್ಕೆಯಾಗುವುದನ್ನು ನಾವು ಸಹಿಸುವುದಿಲ್ಲ" ಎಂದಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ನಿಮ್ಮ ದೇಶ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿದ ಭುಟ್ಟೋ, ಭಾರತ ಎರಡೂ ದೇಶಗಳಲ್ಲಿನ ಮುಸ್ಲಿಮರನ್ನು ಭಯೋತ್ಪಾದಕರೊಂದಿಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು. ಅಲ್ಲದೆ "ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ" ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


