ಮಧ್ಯ ಪ್ರದೇಶ: ತಲೆಗೆ 12 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಎನ್‌ಕೌಂಟರ್‌ಗೆ ಬಲಿ
ತನ್ನ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮಾವೋವಾದಿಯನ್ನು ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ...

ಬಾಲಾಘಾಟ್: ತನ್ನ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮಾವೋವಾದಿಯನ್ನು ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ ಎನ್‌ಕೌಂಟರ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾವೋವಾದಿಗಳು ಮತ್ತು ಹಾಕ್ ಫೋರ್ಸ್ ಸಿಬ್ಬಂದಿಗಳ ನಡುವೆ ಎನ್‌ಕೌಂಟರ್ ನಡೆದಿದ್ದು, ಮಾವೋವಾದಿಗಳ ಸುಳಿವಿನ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ರೂಪ್‌ಜರ್ ಪೊಲೀಸ್ ಠಾಣಾ ವ್ಯಾಪ್ತಿಯ ಹರಟೋಲಾ ಅರಣ್ಯದಲ್ಲಿ ಇಂದು ಬೆಳಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಸಿಂಗ್ ಹೇಳಿದ್ದಾರೆ.
ಮಾವೋವಾದಿಗೆ ಶರಣಾಗುವಂತೆ ಸೂಚಿಸಲಾಯಿತು. ಆದರೆ ಇದಕ್ಕೆ ಒಪ್ಪದ ಮಾವೋವಾದಿ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಹೀಗಾಗಿ ಎನ್ ಕೌಂಟರ್ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.
ಹತ್ಯೆಯಾದ ಮಾವೋವಾದಿಯನ್ನು ಭೋರಮ್‌ದೇವ್ ದಲಂ ಸದಸ್ಯ ರೂಪೇಶ್ ಅಲಿಯಾಸ್ ಹೂಂಗಾ ಎಂದು ಗುರುತಿಸಲಾಗಿದೆ.
ಹೂಂಗಾ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಮಹಾರಾಷ್ಟ್ರ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢದ ಪೊಲೀಸರಿಗೆ ಬೇಕಾಗಿದ್ದ ಎಂದು ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


