ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ
ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ...

ಗೋರಖ್‌ಪುರ: ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖೋರಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈಂಸಾ ಧೋಡಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರ ತಿಲಕಧಾರಿ(50) ಮೃತಪಟ್ಟಿದ್ದು, ಬಸ್ ಚಾಲಕ ಧರ್ಮೇಂದ್ರ ಯಾದವ್(28) ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
62 ಪ್ರಯಾಣಿಕರಿದ್ದ ಬಸ್ ಡಿಯೋರಿಯಾದಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು ಎಂದು ಶಾಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಬಸ್ ಚಾಲಕ ಹಾಗೂ ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಖೋರಾಬರ್ ಠಾಣೆ ಮತ್ತು ರಾಮನಗರ ಕರ್ಜಹಾ ಪೋಸ್ಟ್‌ನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


