ದೇಶ

ಜಾರ್ಖಂಡ್: ಪತ್ನಿ ಕೊಂದು ದೇಹವನ್ನು 12 ಭಾಗಗಳಾಗಿ ಕತ್ತರಿಸಿದ ಪತಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಜಾರ್ಖಂಡ್‌ನಲ್ಲಿ ನಡೆದಿದ್ದು, ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು 12 ತುಂಡುಗಾಳಿಗಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜಾರ್ಖಂಡ್: ಪತ್ನಿ ಕೊಂದು ದೇಹವನ್ನು 12 ಭಾಗಗಳಾಗಿ ಕತ್ತರಿಸಿದ ಪತಿ
ಸಾಂದರ್ಭಿಕ ಚಿತ್ರ
Published On :

ರಾಂಚಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಜಾರ್ಖಂಡ್‌ನಲ್ಲಿ ನಡೆದಿದ್ದು, ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು 12 ತುಂಡುಗಾಳಿಗಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜಾರ್ಖಂಡ್‌ನ ಸಾಹಿಬ್‌ಗಂಜ್‌ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ದೇಹವನ್ನು 12 ಭಾಗಗಳಾಗಿ ಕತ್ತರಿಸಿದ್ದಾನೆ. 22 ವರ್ಷದ ಬುಡಕಟ್ಟು ಮಹಿಳೆಯನ್ನು ಹತ್ಯೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪತಿ ದಿಲ್ದಾರ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರದ್ಧಾವಾಕರ್ ಪ್ರಕರಣದಂತೆಯೇ ಆರೋಪಿ ಕೃತ್ಯವೆಸಗಿದ ಬಳಿಕ ದೇಹದ ಭಾಗಗಳನ್ನು ಹಲವೆಡೆ ಎಸೆದಿರುವುದು ಕಂಡು ಬಂದಿದೆ. ದೇಹದ ಕೆಲವು ಭಾಗಗಳು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಾಹಿಬ್‌ಗಂಜ್‌ ಎಸ್‌ಪಿ ತಿಳಿಸಿದ್ದಾರೆ. 

ಪೊಲೀಸರ ಪ್ರಕಾರ, ಸಂತ್ರಸ್ತೆ ಆರೋಪಿಯ ಎರಡನೇ ಪತ್ನಿಯಾಗಿದ್ದು, ದೇಹದ ಕೆಲವು ಭಾಗಗಳು ಇನ್ನೂ ಕಾಣೆಯಾಗಿವೆ. ನಾಪತ್ತೆಯಾಗಿರುವ ದೇಹದ ಭಾಗಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.