ದೇಶ

ಚೀನಾ 'ಏಕಪಕ್ಷೀಯವಾಗಿ' ಯಥಾಸ್ಥಿತಿ ಬದಲಾಯಿಸಲು ಭಾರತೀಯ ಸೇನೆ ಅವಕಾಶ ನೀಡಲ್ಲ: ಜೈಶಂಕರ್

ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ ಚೀನಾ ಯಥಾಸ್ಥಿತಿಯನ್ನು "ಏಕಪಕ್ಷೀಯವಾಗಿ" ಬದಲಾಯಿಸಲು ಭಾರತೀಯ ಸೇನೆ ಅವಕಾಶ ನೀಡುವುದಿಲ್ಲ ಮತ್ತು ಗಡಿಯಲ್ಲಿ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಲು ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ...

ಚೀನಾ 'ಏಕಪಕ್ಷೀಯವಾಗಿ' ಯಥಾಸ್ಥಿತಿ ಬದಲಾಯಿಸಲು ಭಾರತೀಯ ಸೇನೆ ಅವಕಾಶ ನೀಡಲ್ಲ: ಜೈಶಂಕರ್
ವಿದೇಶಾಂಗ ಸಚಿವ ಎಸ್. ಜೈಶಂಕರ್
Published On :

ನವದೆಹಲಿ: ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ ಚೀನಾ ಯಥಾಸ್ಥಿತಿಯನ್ನು "ಏಕಪಕ್ಷೀಯವಾಗಿ" ಬದಲಾಯಿಸಲು ಭಾರತೀಯ ಸೇನೆ ಅವಕಾಶ ನೀಡುವುದಿಲ್ಲ ಮತ್ತು ಗಡಿಯಲ್ಲಿ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಲು ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ ಹೇಳಿದ್ದಾರೆ.

ಗಡಿ ವಿವಾದವನ್ನು ಕೇಂದ್ರ ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಳ್ಳಿಹಾಕಿದ ಜೈಶಂಕರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದ ಮೇರೆಗೆ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಲು ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ. ರಾಹುಲ್ ಗಾಂಧಿ ಆದೇಶದ ಮೇರೆಗೆ ಭಾರತೀಯ ಸೇನೆಯನ್ನು ನಿಯೋಜನೆಗೊಳಿಸಿಲ್ಲ ಎಂದರು.

"ಚೀನಾ ಗಡಿಯಲ್ಲಿ ನಾವು ಹಿಂದೆಂದೂ ಹೊಂದಿರದ ದೊಡ್ಡ ಪ್ರಮಾಣದ ಸೇನೆಯನ್ನು ನಿಯೋಜನೆ ಮಾಡಿದ್ದೇವೆ.  2020 ರಿಂದ ಚೀನಾ ಬೃಹತ್ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಿದ್ದು, ಅದನ್ನು ಎದುರಿಸಲು ನಾವೂ ಸೇನೆಯನ್ನು ನಿಯೋಜನೆ ಮಾಡಿದ್ದೇವೆ" ಎಂದು ಜೈಶಂಕರ್ ಹೇಳಿದ್ದಾರೆ.

ಇಂಡಿಯಾ ಟುಡೆಯ ಭಾರತ-ಜಪಾನ್ ಸಮಾವೇಶದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜೈಶಂಕರ್, "ರಾಜಕೀಯ ಟೀಕೆಗಳಿಂದ ನಮಗೆ ಯಾವುದೇ ಸಮಸ್ಯೆ, ಇಲ್ಲ ಆದರೆ ನಮ್ಮ ಯೋಧರನ್ನು ಅಗೌರವಗೊಳಿಸಬಾರದು. ಯಾರಾದರೂ ಸಲಹೆ ನೀಡುತ್ತಿದ್ದರೆ ನಾನು ತಲೆಬಾಗಿ ಗೌರವಿಸುತ್ತೇನೆ ಎಂದರು.

ರಾಜಸ್ಥಾನದ ದೌಸಾದಲ್ಲಿ ಭಾರತ್ ಜೋಡೋ ಯಾತ್ರೆಯ ವೇದಿಕೆಯಲ್ಲಿ ಮಾತನಾಡಿದ್ದ ರಾಹುಲ್​ ಗಾಂಧಿ, ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಚೀನಿ ಯೋಧರು ನಮ್ಮ ಯೋಧರನ್ನು ಥಳಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.