ದೇಶ

ಗೋವಾ ಬಿಜೆಪಿ ಶಾಸಕರಲ್ಲಿ ಭಿನ್ನಮತದ ವರದಿ: ಸಿ.ಟಿ. ರವಿ ಹೇಳಿದಿಷ್ಟು

ಗೋವಾ ಸಂಪುಟ ಹಾಗೂ ಸರ್ಕಾರದಲ್ಲಿ ಯಾವುದೇ ಸ್ಥಾನ ನೀಡದಿರುವುದರಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 8 ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಪಕ್ಷದ ಉಸ್ತುವಾರಿ ಸಿ. ಟಿ. ರವಿ ಅಲ್ಲಗಳೆದಿದ್ದಾರೆ.

ಗೋವಾ ಬಿಜೆಪಿ ಶಾಸಕರಲ್ಲಿ ಭಿನ್ನಮತದ ವರದಿ: ಸಿ.ಟಿ. ರವಿ ಹೇಳಿದಿಷ್ಟು
ಸಿಟಿ ರವಿ
Published On :

ಪಣಜಿ: ಗೋವಾ ಸಂಪುಟ ಹಾಗೂ ಸರ್ಕಾರದಲ್ಲಿ ಯಾವುದೇ ಸ್ಥಾನ ನೀಡದಿರುವುದರಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 8 ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಪಕ್ಷದ ಉಸ್ತುವಾರಿ ಸಿ. ಟಿ. ರವಿ ಅಲ್ಲಗಳೆದಿದ್ದಾರೆ.

ಬಿಜೆಪಿ ಕೋರ್ ಕಮಿಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದ ಆರಂಭದಲ್ಲಿ ಪಕ್ಷ ಸೇರಿದ 8 ಶಾಸಕರಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿಜೆಪಿ ಸೇರಿದ ನಂತರ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎಂದು ಕೆಲ ಮಾಧ್ಯಮಗಳ ವರದಿಗಳು ವರದಿ ಮಾಡಿವೆ. ರಾಜ್ಯ ಸರ್ಕಾರದಲ್ಲಿ ಈ ಶಾಸಕರಿಗೆ ಸ್ಥಾನದ ಬೇಡಿಕೆ ಬಗ್ಗೆ ನನಗೆ ತಿಳಿದಿಲ್ಲ. ಅವರೊಂದಿಗೆ ಬಿಜೆಪಿಯಲ್ಲಿ ಅತ್ಯಂತ ಸಂತೋಷದಲ್ಲಿ ಇರುವುದು ನನಗೆ ಗೊತ್ತಿದೆ ಎಂದರು. 

ಸಂಪುಟ ಪುನರ್ ರಚನೆ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಟಿ ರವಿ, ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗೆ ಬಿಟ್ಟ ನಿರ್ಧಾರವಾಗಿದ್ದು, ಪಕ್ಷದಲ್ಲಿ ಎಲ್ಲಾ 8 ಶಾಸಕರಿಗೆ ಜವಾಬ್ದಾರಿ ನೀಡಲಾಗುವುದು ಎಂದು ಅವರು ತಿಳಿಸಿದರು. 

ಬಿಜೆಪಿ ಜನರ ಸಂತೋಷಕ್ಕಾಗಿ ಕೆಲಸ ಮಾಡುತ್ತದೆ, ಯಾವುದೇ ಒಬ್ಬ ವ್ಯಕ್ತಿಯ ಪರವಾಗಿ ಕೆಲಸ ಮಾಡಲ್ಲ ಎಂದು ಸಿಟಿ ರವಿ ಹೇಳಿದರು. ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆದ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.