ಚೀನಾದಲ್ಲಿನ ಕೋವಿಡ್ ಪರಿಸ್ಥಿತಿ ಮೇಲೆ ಭಾರತದ ಕಣ್ಣು- ಎಂಇಎ
ಚೀನಾದಲ್ಲಿ ದಿಢೀರ್ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆ ರಾಷ್ಟ್ರದ ಪರಿಸ್ಥಿತಿ ಮೇಲೆ ಭಾರತ ಕಣ್ಣಿಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

ನವದೆಹಲಿ: ಚೀನಾದಲ್ಲಿ ದಿಢೀರ್ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆ ರಾಷ್ಟ್ರದ ಪರಿಸ್ಥಿತಿ ಮೇಲೆ ಭಾರತ ಕಣ್ಣಿಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಇತರ ರಾಷ್ಟ್ರಗಳಿಗೆ ಯಾವಾಗಲೂ ಔಷಧಗಳ ನೆರವು ನೀಡುತ್ತಾ ಬಂದಿದ್ದೇವೆ. ಪ್ರಯಾಣ ಮಾರ್ಗಸೂಚಿಯನ್ನು ಇನ್ನೂ ಹೊರಡಿಸಿಲ್ಲ. ಆದರೆ, ಜನರು ತಾವು ವಾಸಿಸುತ್ತಿರುವ ಕಡೆಗಳಲ್ಲಿ ದೇಶದಲ್ಲಿನ ಸ್ಥಳೀಯ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದರು.
ಸಿಎಎ ವರದಿ ಪ್ರಕಾರ ಇತ್ತೀಚಿಗೆ ಚೀನಾದಲ್ಲಿ ಕೋವಿಡ್ ನಿಂದ ಸುಮಾರು 1 ಮಿಲಿಯನ್ ನಷ್ಟು ಜನರು ಸಾವನ್ನಪ್ಪಿದ್ದಾರೆ. ಈ ತಿಂಗಳು ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ, ಚೀನಾದಲ್ಲಿನ ಪ್ರಮುಖ ನಗರಗಳಲ್ಲಿ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ.
ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದಲೂ ವೈರಸ್ ಹರಡುವಿಕೆ ತಡೆಯಲು ಕಟ್ಟುನಿಟ್ಟಾದ ಲಾಕ್‌ಡೌನ್‌ಗಳು, ಸಾಮೂಹಿಕ ಪರೀಕ್ಷೆ ಮತ್ತು ಸೋಂಕು ಪತ್ತೆ ಕಾರ್ಯವನ್ನು ಚೀನಾ ಸರ್ಕಾರ ನಡೆಸುತ್ತಾ ಬಂದಿದೆ.
ಲಂಡನ್ ಮೂಲದ ಜಾಗತಿಕ ಆರೋಗ್ಯ ಗುಪ್ತಚರ ಮತ್ತು ವಿಶ್ಲೇಷಣಾ ಸಂಸ್ಥೆಯ ಪ್ರಕಾರ, ಕಡಿಮೆ ವ್ಯಾಕ್ಸಿನೇಷನ್ ಮತ್ತಿತರ ಕಾರಣದಿಂದಾಗಿ ಚೀನಾದಲ್ಲಿ 1.3 ಮತ್ತು 2.1 ಮಿಲಿಯನ್ ಜೀವಗಳು ಅಪಾಯಕ್ಕೆ ಒಳಗಾಗಬಹುದು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


