ದೇಶದಾದ್ಯಂತ ಕೋವಿಡ್ ಭೀತಿ: 24 ಗಂಟೆಗಳಲ್ಲಿ 201 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಇದೇ ವೇಲೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.14ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ.
24 ಗಂಟೆಗಳ ಅವಧಿಯಲ್ಲಿ 1,36,315 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೂ 90.97 ಕೋಟಿ ಜನರಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಾದ್ಯಂತ ಈವರೆಗೂ 4,41,42,791 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಮರಣ ಪ್ರಾಣ ಶೇ 1.19ರಷ್ಟಿದೆ.
ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.04 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


