ದೇಶ

ಲಕ್ನೋ: ರೈಲು ಡಿಕ್ಕಿ , 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು

ರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.

ಲಕ್ನೋ: ರೈಲು ಡಿಕ್ಕಿ , 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು
ಸಾಂದರ್ಭಿಕ ಚಿತ್ರ
Published On :

ಲಕ್ನೋ: ರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.

ಪಂಚ ಪರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸರಯು ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ನಾಯಿಗಳು ಕುರಿಗಳ ಹಿಂಡನ್ನು ಅಟ್ಟಾಡಿಸಿಕೊಂಡು ಬಂದಿದ್ದರಿಂದ ಗಾಬರಿಗೊಂಡ ಕುರಿಗಳು ರೈಲ್ವೆ ಹಳಿ ಮೇಲೆ ಬಂದಿವೆ. ಈ ಸಂದರ್ಭ ಆ ಮಾರ್ಗದಲ್ಲಿ ಬಂದ ರೈಲೊಂದು ಡಿಕ್ಕಿ ಹೊಡೆದು ಕುರಿಗಳು ಸಾವಿಗೀಡಾಗಿವೆ ಎಂದು ವರದಿ ತಿಳಿಸಿದೆ.

ಇದಾದ ಸ್ವಲ್ಪ ಸಮಯದ ಬಳಿಕ ಸತ್ತ ಕುರಿಗಳ ಮಾಂಸ ತಿನ್ನಲು ಬಂದಿದ್ದ ರಣಹದ್ದುಗಳಿಗೆ ಮತ್ತೊಂದು ರೈಲು ಡಿಕ್ಕಿಹೊಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.