ದೇಶ

ದೇಶದಲ್ಲಿ ಕೋವಿಡ್ ಭೀತಿ: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 196 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶದಲ್ಲಿ ಕೋವಿಡ್ ಭೀತಿ: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 196 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 4,46,77,302 ಮಂದಿಗೆ ಕೋವಿಡ್ ತಗುಲಿದ್ದು, ಮೃತರ ಸಂಖ್ಯೆ 5,30,695 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳದಲ್ಲಿ ಇಬ್ಬರು ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 0.56ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.16ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

24 ಗಂಟೆಗಳಲ್ಲಿ ದೇಶದಾದ್ಯಂತ 35,173 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 4,41,43,179 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ ಕೋವಿಡ್ ವಿರುದ್ಧದ 220.05 ಕೋಟಿ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.