ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳು ತಿಳಿಸಿವೆ.
ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೇ? ಅಥವಾ ಅವರ ಆರೋಗ್ಯದಲ್ಲಿ ಏರುಪೇರಾಗಿದೆಯೇ? ಎಂಬ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


