ಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ
ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.
ಮಾಕ್ ಡ್ರಿಲ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿದ್ದು, ಇಂತಹ ಪರಿಸ್ಥಿತಿಯಲ್ಲಿ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳ ಕಾರ್ಯಾಚರಣೆಯ ಸಿದ್ಧತೆ ಪರಿಶೀಲಿಸುವುದು ಮುಖ್ಯ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನಿರ್ವಹಿಸುತ್ತಿರುವ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮನ್ಸುಖ್ ಮಾಂಡವೀಯ ಅಣಕು ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಆಸ್ಪತ್ರೆಗಳಲ್ಲಿ ಇಂತಹ ಅಣಕು ಕಾರ್ಯಾಚರಣೆಯನ್ನು ನಡೆಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಕ್ಕೆ ಸೂಚನೆ ನೀಡಿತ್ತು.
ಆಕ್ಸಿಜನ್ ಬೆಂಬಲಿತ ಬೆಡ್ ಗಳು, ಐಸಿಯು ಬೆಡ್ ಹಾಗೂ ವೆಂಟಿಲೇಟರ್ ಬೆಂಬಲಿತ ಬೆಡ್ ಗಳ ಲಭ್ಯತೆ ಹಾಗೂ ಕಾರ್ಯನಿರ್ವಹಣೆಯ ಸಾಮರ್ಥ್ಯವನ್ನು ಈ ಅಣಕು ಕಾರ್ಯಾಚರಣೆ ವೇಳೆ ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇವಲ ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಈ ಅಣಕು ಕಾರ್ಯಾಚರಣೆ ನಡೆಸಲಾಗಿದೆ. ಜನತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿರುವುದು ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
ಇನ್ನು ಜನತೆ ಕೋವಿಡ್ ಸಂಬಂಧಿತ ದೃಢಪಡದ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ದೂರವಿರಬೇಕು ಹಾಗೂ ಕೋವಿಡ್ ತಡೆಗೆ ಅತಿ ಹೆಚ್ಚು ಜಾಗರೂಕತೆಯಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನ್ಸುಖ್ ಮಾಂಡವೀಯ ಕರೆ ನೀಡಿದ್ದಾರೆ. ಭಾರತದಲ್ಲಿ 24 ಗಂಟೆಗಳಲ್ಲಿ 157 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


