ದೇಶ

ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣ

ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ ಆ ದುರ್ಘಟನೆ ನಡೆದಿದೆ.

ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣ
ಚಂದ್ರಬಾಬು ನಾಯ್ಡು ಪ್ರಚಾರ ಸಭೆ ಚಿತ್ರ
Published On :

ನೆಲ್ಲೂರು: ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ  ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ  ಆ ದುರ್ಘಟನೆ ನಡೆದಿದೆ.

ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದ್ದು, ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ ತಪ್ಪಿಸಿಕೊಂಡರೆ, ಮತ್ತೆ ಕೆಲವರು ಜನರ ಗುಂಪಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ತನ್ನ ಪ್ರಚಾರ ಕಾರ್ಯಕ್ರಮವನ್ನು ರದ್ದುಗೊಳಿಸಿದ ಚಂದ್ರಬಾಬ್ಡು, ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 2024ರ ವಿಧಾನಸಭಾ ಚುನಾವಣೆ ಅಂಗವಾಗಿ ಚಂದ್ರಬಾಬು ನಾಯ್ಡು ಸಾರ್ವಜನಿಕ ಸಭೆ ಹಾಗೂ ರೋಡ್ ಶೋ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.