ನನ್ನ ಪ್ರೀತಿ, ಬೆಂಬಲ ನಿಮ್ಮೊಂದಿಗಿದೆ: ಪ್ರಧಾನಿ ಮೋದಿ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ರಾಹುಲ್
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಗುಜರಾತ್ ನ ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಶೀಘ್ರ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಗುಜರಾತ್ ನ ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.
"ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದದ್ದು. ಈ ಕಷ್ಟದ ಸಮಯದಲ್ಲಿ ಮೋದಿಜಿ, ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ(100) ಅವರನ್ನು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
"ಪ್ರಧಾನಿ ಮೋದಿ ಅವರ ತಾಯಿ ಅಸ್ವಸ್ಥರಾಗಿದ್ದಾರೆ ಎಂಬ ಸುದ್ದಿ ನಮಗೆ ಬಂದಿದೆ. ಈ ಸಮಯದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟ್ವೀಟ್ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆರೋಗ್ಯವಾಗಿರಬೇಕು ಎಂದು ನಾವು ಬಯಸುತ್ತೇವೆ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


