ತಾಯಿ ಹೀರಾಬೆನ್ ಆರೋಗ್ಯ ವಿಚಾರಿಸಲು ಅಹಮದಾಬಾದ್ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ.

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ.
ಇಂದು ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಗುಜರಾತ್ ನ ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ಮೋದಿ ಅವರು ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ತಕ್ಷಣ ಅಹಮದಾಬಾದ್ ಗೆ ಆಗಮಿಸಿ, ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.
ಇನ್ನು ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಲವು ಸಚಿವರು, ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ಬಗ್ಗೆ ವಿಚಾರಿಸುತ್ತಿದ್ದಾರೆ.
ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


