ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.
ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಮಧ್ಯಾಹ್ನದ ವೇಳೆಗೆ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


