2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ
ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ...

ನವದೆಹಲಿ: ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಹೊಸ ವರದಿ ತಿಳಿಸಿದೆ.
'ಭಾರತದಲ್ಲಿ ರಸ್ತೆ ಅಪಘಾತಗಳು - 2021' ಎಂಬ ಶೀರ್ಷಿಕೆಯ ವರದಿಯನ್ನು ಕೇಂದ್ರ ಬಿಡುಗಡೆ ಮಾಡಿದ್ದು, 2019 ಕ್ಕೆ ಹೋಲಿಸಿದರೆ 2021ರಲ್ಲಿ ಕಡಿಮೆ ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.
"2019 ಕ್ಕೆ ಹೋಲಿಸಿದರೆ 2021 ರಲ್ಲಿ ರಸ್ತೆ ಅಪಘಾತಗಳು ಶೇಕಡಾ 8.1 ರಷ್ಟು ಕಡಿಮೆಯಾಗಿದೆ ಮತ್ತು ಗಾಯಗಳ ಸಂಖ್ಯೆ ಸಹ ಶೇಕಡಾ 14.8 ರಷ್ಟು ಕಡಿಮೆಯಾಗಿದೆ.
ಇನ್ನು 2021 ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 16,397 ಜನ ಸೀಟ್ ಬೆಲ್ಟ್ ಧರಿಸದ ಕಾರಣಕ್ಕೆ ಮೃತಪಟ್ಟಿದ್ದಾರೆ. ಈ ಪೈಕಿ 8,438 ಚಾಲಕರು, 7,959 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ವರದಿ ತಿಳಿಸಿದೆ.
ಇದೇ ವೇಳೆ ಹೆಲ್ಮೆಟ್ ಧರಿಸದ ಕಾರಣಕ್ಕೆ 46,593 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದರಲ್ಲಿ 32,877 ಜನ ಸವಾರರಾದರೆ, 13,716 ಜನ ಪ್ರಯಾಣಿಕರು ಎಂದು ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


