ದೇಶ

ಪಶ್ಚಿಮ ಬಂಗಾಳ ರಾಜ್ಯದ ಸಚಿವ ಸುಬ್ರತಾ ಸಹಾ ಹಠಾತ್ ನಿಧನ

ಪಶ್ಚಿಮ ಬಂಗಾಳದ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವರು ಸುಬ್ರತಾ ಸಹಾ ಅವರು ಗುರುವಾರ ನಿಧನ ಹೊಂದಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಸಚಿವ ಸುಬ್ರತಾ ಸಹಾ ಹಠಾತ್ ನಿಧನ
ಸುಬ್ರತಾ ಸಹಾ
Published On :

ಕೋಲ್ಕತಾ: ಪಶ್ಚಿಮ ಬಂಗಾಳದ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವರು ಸುಬ್ರತಾ ಸಹಾ ಅವರು ಗುರುವಾರ ನಿಧನ ಹೊಂದಿದ್ದಾರೆ.

ಸುಬ್ರತಾ ಸಹಾ ಅವರು ಇಂದು ಬೆಳಗ್ಗೆ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿನಲ್ಲಿ ಹಠಾತ್ ನಿಧನರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬುಧವಾರ ರಾತ್ರಿ ಹಠಾತ್ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಬೆರ್ಹಾಂಪೋರ್‌ನ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಸುಬ್ರತಾ ಸಹಾ ಅವರು ರಾಜ್ಯದ ಆಹಾರ ಸಂಸ್ಕರಣಾ ಇಲಾಖೆಯ ರಾಜ್ಯ ಸಚಿವರಾಗಿದ್ದು, ಮುರ್ಷಿದಾಬಾದ್‌ನ ಸಾಗರ್ದಿಘಿಯಿಂದ ಶಾಸಕರಾಗಿದ್ದಾರೆ.

ಸುಬ್ರತಾ ಸಹಾ ಅವರಿಗೆ 69 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಸುಬ್ರತಾ ಅವರ ಪಿತ್ತಕೋಶದ ಶಸ್ತ್ರಚಿಕಿತ್ಕೆ ಕೋಲ್ಕತ್ತಾದಲ್ಲಿ ನಡೆದಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು ಬುಧವಾರ ಬೆಳಗ್ಗೆ ಜಿಲ್ಲೆಗೆ ಮರಳಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬೆರ್ಹಾಂಪೋರ್‌ನ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10:40ರ ಸುಮಾರಿಗೆ ಅವರು ಹಠಾತ್ ನಿಧನರಾಗಿದ್ದಾರೆ.

ಸಂಪುಟದಲ್ಲಿ ತಮ್ಮ ಸಹೋದ್ಯೋಗಿಯಾಗಿರುವ ಸುಬ್ರತಾ ಸಹಾ ಅವರ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸುಬ್ರತಾಬಾಬು ಅವರು ಆಪ್ತರಾಗಿದ್ದರು, ಅವರ ರಾಜಕೀಯ ಮತ್ತು ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.