ಭಾರತ್ ಜೋಡೋ ಯಾತ್ರೆಗೆ ಆಹ್ವಾನವಿಲ್ಲ: ಅಖಿಲೇಶ್ ಯಾದವ್
ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ಲಖನೌ: ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಭಾವನೆಗಳು ಅವರ ಯಾತ್ರೆಯೊಂದಿಗೆ ಇವೆ (ಆದರೆ) ನನಗೆ ಅದಕ್ಕೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್, ನಮ್ಮ ಪಕ್ಷದ ಸಿದ್ಧಾಂತ ವಿಭಿನ್ನವಾಗಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಂದೇ ಎಂದರು.
ಚಳಿಯಿಂದಾಗಿ ಪ್ರಸ್ತುತ ವಿರಾಮದಲ್ಲಿರುವ ಭಾರತ್ ಜೋಡೋ ಯಾತ್ರೆ ಜನವರಿ 3 ರಿಂದ ದೆಹಲಿಯಿಂದ ಪುನರ್ ಆರಂಭವಾಗಲಿದ್ದು, ಉತ್ತರ ಪ್ರದೇಶ ಮೂಲಕ ಸಾಗಲಿದೆ. ಅಖಿಲೇಶ್ ಯಾದವ್, ಮಾಯಾವತಿ, ಜಯಂತ್ ಚೌಧರಿ ಸೇರಿದಂತೆ ಹಲವು ಪಕ್ಷಗಳ ಮುಖಂಡರನ್ನು ಯಾತ್ರೆಯಲ್ಲಿ ಸೇರಲು ಆಹ್ವಾನ ನೀಡಿರುವುದಾಗಿ ಕಾಂಗ್ರೆಸ್ ಹೇಳಿತ್ತು.
ಯಾದವ್ ಪೂರ್ವ ನಿರ್ಧರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಎಸ್ ಪಿ ವಕ್ತಾರ ರಾಜೇಂದ್ರ ಚೌಧರಿ ಈ ಹಿಂದೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


