ಚೀನಾ ಸೇರಿ 6 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ
ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ...

ನವದೆಹಲಿ: ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುರುವಾರ ಘೋಷಿಸಿದ್ದಾರೆ.
ಈ ಐದು ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ತಮ್ಮ ಆರ್ ಟಿ-ಪಿಸಿಆರ್ ವರದಿಗಳನ್ನು ಏರ್ ಸುವಿಧಾ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಪರೀಕ್ಷಿಸಲಾದ 6,000 ಮಂದಿಯಲ್ಲಿ ಕನಿಷ್ಠ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಹಿಂದಿನ ಟ್ರೆಂಡ್‌ಗಳನ್ನು ಉಲ್ಲೇಖಿಸಿ, ಮುಂದಿನ 40 ದಿನಗಳು ನಿರ್ಣಾಯಕವಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಭಾರತದಲ್ಲಿ ಜನವರಿಯಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣವಾಗಬಹುದು ಎನ್ನಲಾಗಿದೆ.
"ಹಿಂದೆ, ಕೋವಿಡ್-19ರ ಹೊಸ ಅಲೆಯು ಪೂರ್ವ ಏಷ್ಯಾದಲ್ಲಿ ಕಾಣಿಸಿಕೊಂಡ ಸುಮಾರು 30-35 ದಿನಗಳ ನಂತರ ಭಾರತ ಉಲ್ಬಣಗೊಂಡಿತ್ತು. ಹೀಗಾಗಿ ಇದು ಒಂದು ಪ್ರವೃತ್ತಿಯಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


