ತಾಯಿ ಹೀರಾಬೆನ್ ಅಂತ್ಯಕ್ರಿಯೆ ನೆರವೇರಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ಮೋದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವು ಯೋಜನೆಗಳಿಗೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಕರ್ತವ್ಯಕ್ಕೆ ಮರಳಿದ್ದಾರೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಕರ್ತವ್ಯಕ್ಕೆ ಮರಳಿದ್ದಾರೆ.
ತಾಯಿಯ ಅಂತಿಮ ವಿಧಿ ವಿಧಾನದ ನೆರವೇರಿಸಿದ ಬಳಿಕ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿನ ಸುಮಾರು 7,800 ಕೋಟಿ ರೂಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಿದರು.
ಬೆಳಿಗ್ಗೆಯೇ ಅವರು ಪಶ್ಚಿಮಬಂಗಾಳಕ್ಕೆ ತೆರಳಬೇಕಿತ್ತು, ಆದರೆ ತಾಯಿಯ ಮರಣದ ಹಿನ್ನೆಲೆಯಲ್ಲಿ ಅಹ್ಮದಾಬಾದಿಗೆ ಬರಬೇಕಾದ ಕಾರಣ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿಯವರು, ನಾನು ಪಶ್ಚಿಮ ಬಂಗಾಳಕ್ಕೆ ಬರಬೇಕಿತ್ತು. ಆದರೆ, ವೈಯಕ್ತಿಕ ಕಾರಣಗಳಿಂದ ನಾನು ಅಲ್ಲಿಗೆ ಬರಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಪಶ್ಚಿಮ ಬಂಗಾಳದ ಜನತೆ ಬಳಿ ಕ್ಷಮೆಯಾಚಿಸುತ್ತೇನೆಂದು ಹೇಳಿದರು.
ಇಂದು ಮುಂಜಾನೆ ಗಾಂಧಿನಗರಕ್ಕೆ ಆಗಮಿಸಿದ ಪ್ರಧಾನಿ ಮೋದಿ, ತಮ್ಮ ಸಹೋದರರೊಂದಿಗೆ ತಾಯಿ ಹೀರಾಬೆನ್ ಮೋದಿ ಅವರ ಅಂತಿಮ ವಿಧಿ ವಿಧಾನ ನೆರವೇರಿಸಿದರು.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಗುಜರಾತ್ ಸಂಪುಟ ಸಚಿವರು ಹೀರಾಬಾ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರು.
ತಾಯಿಯ ಮರಣದ ದುಃಖದ ನಡುವೆಯೂ ಮೋದಿ ತಮ್ಮ ಕರ್ತವ್ಯಗಳನ್ನು ಎಂದಿನಂತೆ ಪಾಲಿಸುತ್ತಿದ್ದಾರೆ. ಮೋದಿಯವರ ಈ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


