ರಾಮ-ಹನುಮಂತ ಬಿಜೆಪಿಯ ಹಕ್ಕುಸ್ವಾಮ್ಯವಲ್ಲ: ಕೇಸರಿ ಪಾಳಯಕ್ಕೆ ತಲೆ ನೋವಾದ ಉಮಾಭಾರತಿ
ಬಿಜೆಪಿ ನಾಯಕಿ ಉಮಾಭಾರತಿ ಅವರ ಹೇಳಿಕೆಗಳು ಪಕ್ಷಕ್ಕೆ ಸಂಕಷ್ಟವನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ 'ಸುತ್ತಮುತ್ತ ನೋಡಿ' ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು.

ಬಿಜೆಪಿ ನಾಯಕಿ ಉಮಾಭಾರತಿ ಅವರ ಹೇಳಿಕೆಗಳು ಪಕ್ಷಕ್ಕೆ ಸಂಕಷ್ಟವನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ 'ಸುತ್ತಮುತ್ತ ನೋಡಿ' ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು. ಇದೀಗ ಅವರ ಮತ್ತೊಂದು ಹೇಳಿಕೆ ಸಂಚಲನ ಮೂಡಿಸಿದೆ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಹಕ್ಕುಸ್ವಾಮ್ಯವಲ್ಲ ಎಂದು ಉಮಾಭಾರತಿ ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜ್ಯದಲ್ಲಿ ಹನುಮಂತನ ಮಂದಿರ ನಿರ್ಮಾಣ ಮಾಡುವುದಾಗಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉಮಾಭಾರತಿ ಈ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯದಲ್ಲಿ ಮದ್ಯಪಾನ ನಿಷೇಧದ ಬೇಡಿಕೆ ಇಟ್ಟಿದ್ದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯ ಸರ್ಕಾರ ತಮ್ಮನ್ನು ಮೂಲೆಗುಂಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ, ಉಮಾಭಾರತಿ ಮಧ್ಯಪ್ರದೇಶದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿ ಮದ್ಯದಂಗಡಿಗಳ ಮೇಲೆ ಕಲ್ಲು ಎಸೆದು ಸುದ್ದಿಯಾಗಿದ್ದರು.
ಉಮಾಭಾರತಿ ಮಧ್ಯಪ್ರದೇಶದ ಮಾಜಿ ಸಿಎಂ ಆಗಿದ್ದು, ರಾಜ್ಯದ ಅತ್ಯುತ್ತಮ ವರ್ಚಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಇನ್ನು ಪಕ್ಷದ ಹೈಕಮಾಂಡ್ ತನ್ನನ್ನು ಕಡೆಗಣಿಸಿದ್ದರಿಂದ ಅವರು ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ. ಇನ್ನು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ವಿವಾದಾತ್ಮಕ ಹೇಳಿಕೆಯನ್ನು ಬೆಂಬಲಿಸಿದ ಉಮಾಭಾರತಿ, ಹಿಂದೂಗಳು ತಮ್ಮ ಮನೆಯಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
‘ಪಠಾಣ್’ ಚಿತ್ರದ ಗಲಾಟೆಗೆ ಪ್ರತಿಭಟನೆಯ ಅಗತ್ಯವೇನಿದೆ ಎಂದು ಉಮಾಭಾರತಿ ಪ್ರಶ್ನಿಸಿದ್ದಾರೆ. ‘ಬಿಜೆಪಿ ಸರ್ಕಾರದ ಸೆನ್ಸಾರ್ ಮಂಡಳಿ ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಬೇಕು’ ಎಂದರು. ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು. ಯಾರೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದರು. ಯಾವುದೇ ಬಣ್ಣದ ಅವಮಾನವನ್ನು ಭಾರತ ಸಹಿಸುವುದಿಲ್ಲ. ಕೇಸರಿ ಭಾರತೀಯ ಸಂಸ್ಕೃತಿಯ ಅಸ್ಮಿತೆ, ಸೆನ್ಸಾರ್ ಮಂಡಳಿ ಈ ದೃಶ್ಯಗಳನ್ನು ಕೂಡಲೇ ತೆಗೆದುಹಾಕಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


