ರಾಹುಲ್ ಗಾಂಧಿ ಕುರಿತು ತಪ್ಪು ಅರ್ಥ ಮೂಡಿಸುವ ವಿಡಿಯೋ: ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ
ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿ ಸಂಪೂರ್ಣ ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.

ನವದೆಹಲಿ: ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿ ಸಂಪೂರ್ಣ ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.
ಕೇಂದ್ರ ಸಚಿವ ರಾಜ್ಯವರ್ಧನ್ ರಾಥೋಡ್ ಅವರೂ ಸೇರಿದಂತೆ ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿ ವಿರುದ್ಧದ ತಿರುಚಲಾಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿರುವ ಕಾಂಗ್ರೆಸ್, ಇದಕ್ಕೆ ಬಿಜೆಪಿ ಕ್ಷಮೆ ಕೇಳದೇ ಇದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದೆ.
ಇದೇ ವೇಳೆ ರಾಹುಲ್ ಗಾಂಧಿ ಸಹ ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಚಾರ ಹಾಗೂ ಸುಳ್ಳುಗಳೇ ಅವರ ಅಡಿಪಾಯ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ರಾಥೋಡ್ ಅವರನ್ನು ನಾಚಿಕೆ ಇಲ್ಲದವರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಮಾಧ್ಯಮಗಳೂ ತಪ್ಪಾಗಿ ರಾಹುಲ್ ಅವರ ಭಾಷಣವನ್ನು ತೋರಿಸಿವೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಕೇರಳದಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಎಸ್ಎಫ್ಐ ನ ಹಿಂಸಾಚಾರದ ಬಗ್ಗೆ ಮಾತನಾಡಿದ್ದರು, ಆದರೆ ಅದನ್ನು ಅವರು ಉದಯ್ ಪುರದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಎಂಬಂತೆ ತಿರುಚಲಾಗಿದೆ ಎಂಬುದು ಕಾಂಗ್ರೆಸ್ ನ ಆರೋಪವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


