ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಶಾಸಕ ಪಿಸಿ ಜಾರ್ಜ್ ಬಂಧನ
ಸೋಲಾರ್ ಪ್ಯಾನಲ್ ಪ್ರಕರಣದಲ್ಲಿ ಆರೋಪಿಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಆಧಾರದ ಮೇಲೆ ಕೇರಳದ ಹಿರಿಯ ರಾಜಕಾರಣಿ ಮತ್ತು ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವನಂತಪುರಂ: ಸೋಲಾರ್ ಪ್ಯಾನಲ್ ಪ್ರಕರಣದಲ್ಲಿ ಆರೋಪಿಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಆಧಾರದ ಮೇಲೆ ಕೇರಳದ ಹಿರಿಯ ರಾಜಕಾರಣಿ ಮತ್ತು ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 10 ರಂದು ಪಿಸಿ ಜಾರ್ಜ್ ತನ್ನನ್ನು ತೈಕಾಡ್‌ನಲ್ಲಿರುವ ಅತಿಥಿ ಗೃಹಕ್ಕೆ ಆಹ್ವಾನಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ತದನಂತರವು ಜಾರ್ಜ್ ಅವರು ಅನುಚಿತ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಆರೋಪಕ್ಕೆ ಸಂಬಂಧಿಸಿದಂತೆ ಪಿಸಿ ಜಾರ್ಜ್ ಅವರನ್ನು ತಿರುವನಂತಪುರಂನ ಗೆಸ್ಟ್ ಹೌಸ್‌ನಿಂದ ಕಂಟೋನ್ಮೆಂಟ್ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ಕ್ರೈಂ ಬ್ರಾಂಚ್ ಅವರನ್ನು ವಿಚಾರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


