ದೇಶ

ಮೋದಿಯನ್ನು ಸ್ವಾಗತಿಸದ ಕೆಸಿಆರ್: ಮೂರನೇ ಬಾರಿಯೂ ಶಿಷ್ಟಾಚಾರ ಮುರಿದ ತೆಲಂಗಾಣ ಸಿಎಂ!

ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಕೆಲವೇ ಗಂಟೆಗಳ ಮೊದಲು ಅದೇ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಬರಲಿದ್ದಾರೆ.

ಮೋದಿಯನ್ನು ಸ್ವಾಗತಿಸದ ಕೆಸಿಆರ್: ಮೂರನೇ ಬಾರಿಯೂ ಶಿಷ್ಟಾಚಾರ ಮುರಿದ ತೆಲಂಗಾಣ ಸಿಎಂ!
ಕೆಸಿಆರ್ ಮತ್ತು ಮೋದಿ
Published On :

ಹೈದರಾಬಾದ್: ಎರಡು ದಿನಗಳ ಕಾಲ ನಡೆಯುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಇಂದು ಹೈದರಾಬಾದ್ ಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಬರುತ್ತಿಲ್ಲ.

ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಕೆಲವೇ ಗಂಟೆಗಳ ಮೊದಲು ಅದೇ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಬರಲಿದ್ದಾರೆ. ಜುಲೈ 18 ರಂದು ನಡೆಯಲಿರುವ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸಿನ್ಹಾ ಅವರಿಗೆ ಬೆಂಬಲ ನೀಡುವುದಾಗಿ ಕೆಸಿಆರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ಯಶವಂತ್ ಸಿನ್ಹಾ ಅವರನ್ನು ಬರಮಾಡಿಕೊಳ್ಳಲಿದ್ದಾರೆ, ಆದರೆ  ಪಶುಸಂಗೋಪನೆ (ಪಶುಸಂಗೋಪನೆ) ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನ ಮಂತ್ರಿಯನ್ನು ಹೈದರಾಬಾದ್‌ಗೆ ಸ್ವಾಗತಿಸಲಿದ್ದಾರೆ. ವಿಶೇಷವೆಂದರೇ ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ತಿಂಗಳಲ್ಲಿ ಮೂರನೇ ಬಾರಿಗೆ ತೆಲಂಗಾಣಕ್ಕೆ ಆಗಮಿಸುತ್ತಿದ್ದು, ಒಂದು ಬಾರಿಯೂ ಪ್ರದಾನಿ ಅವರನ್ನು ಆಹ್ವಾನಿಸದೇ ಶಿಷ್ಟಾಚಾರ ಮುರಿದಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ವ್ಯಾಪಿಸುವುದು ಮತ್ತು ಈ ವರ್ಷಾಂತ್ಯದಲ್ಲಿ ಎರಡು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವುದು ಮುಂತಾದ ಮಹತ್ವದ ಅಜೆಂಡಾ ಕುರಿತು ಹೈದರಾಬಾದ್‌ನಲ್ಲಿ ಬಿಜೆಪಿಯ ದೊಡ್ಡ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.

ಜುಲೈ 2-3 ರಂದು ಇಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂತಾದ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಪ್ರೋಟೋಕಾಲ್ ಪ್ರಕಾರ ಪ್ರಧಾನಿಯನ್ನು ಸ್ವಾಗತಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.