ಇಂದಿನಿಂದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ; ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ನಾಳೆ ಸದನದಲ್ಲಿ ವಿಶ್ವಾಸಮತ ಪರೀಕ್ಷೆ
ನಾಲ್ಕು ದಿನಗಳ ಶಿವಸೇನೆ-ಬಿಜೆಪಿ ಸರ್ಕಾರ ಇಂದು ಭಾನುವಾರದಿಂದ ಆರಂಭವಾಗುತ್ತಿರುವ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಳೆ ಜುಲೈ 4ರಂದು ವಿಶ್ವಾಸ ಮತ ಎದುರಿಸಲಿದೆ. ವಿಧಾನಸಭೆ ಸ್ಪೀಕರ್ ಚುನಾವಣೆ ಇಂದು ಸದನದ ಕಲಾಪ ಮುಗಿದ ನಂತರ ಆರಂಭವಾಗಿದೆ.

ಮುಂಬೈ: ನಾಲ್ಕು ದಿನಗಳ ಶಿವಸೇನೆ-ಬಿಜೆಪಿ ಸರ್ಕಾರ ಇಂದು ಭಾನುವಾರದಿಂದ ಆರಂಭವಾಗುತ್ತಿರುವ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಳೆ ಜುಲೈ 4ರಂದು ವಿಶ್ವಾಸ ಮತ ಎದುರಿಸಲಿದೆ. ವಿಧಾನಸಭೆ ಸ್ಪೀಕರ್ ಚುನಾವಣೆ ಇಂದು ಸದನದ ಕಲಾಪ ಮುಗಿದ ನಂತರ ಆರಂಭವಾಗಿದೆ.
ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಿವಸೇನಾ ಶಾಸಕ ಮತ್ತು ಉದ್ಧವ್ ಠಾಕ್ರೆ ನಿಷ್ಠ ರಾಜನ್ ಸಾಲ್ವಿ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರು ಮೊದಲ ಬಾರಿಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ವಿರುದ್ಧ ಕಣಕ್ಕಿಳಿದಿದ್ದಾರೆ.
ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಬೆಂಬಲಿಸುವ ಬಂಡಾಯ ಶಿವಸೇನೆ ಶಾಸಕರು ನಿನ್ನೆ ಸಂಜೆ ಗೋವಾದಿಂದ ಮುಂಬೈಗೆ ವಾಪಸ್ಸಾಗಿದ್ದರು. ಅವರನ್ನು ದಕ್ಷಿಣ ಮುಂಬೈನ ಐಷಾರಾಮಿ ಹೋಟೆಲ್‌ನಲ್ಲಿ ಇರಿಸಲಾಗಿತ್ತು., ಅಲ್ಲಿಂದ ವಿಶ್ವಾಸ ಮತ ಪರೀಕ್ಷೆ ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ವಿಧಾನ ಭವನವಿದೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ವಿರುದ್ಧ ಅವಿಶ್ವಾಸ ಗೊತ್ತುವಳಿ ಬಾಕಿ ಇದ್ದರೂ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರು ಸ್ಪೀಕರ್ ಅವರ ಕರ್ತವ್ಯವನ್ನು ನಿರ್ವಹಿಸಬಹುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ನಾನಾ ಪಟೋಲೆ ರಾಜೀನಾಮೆ ನೀಡಿದ ನಂತರ ಕಳೆದ ವರ್ಷ ಫೆಬ್ರವರಿಯಿಂದ ಸ್ಪೀಕರ್ ಹುದ್ದೆ ಖಾಲಿಯಾಗಿದೆ.
ಶಿವಸೇನೆಯ 39 ಬಂಡಾಯ ಶಾಸಕರು ಸೇರಿದಂತೆ ಶಿಂಧೆ ಅವರನ್ನು ಬೆಂಬಲಿಸುವ 50 ಶಾಸಕರು ನಿನ್ನೆ ಶನಿವಾರ ಸಂಜೆ ಗೋವಾದಿಂದ ಚಾರ್ಟರ್ಡ್ ವಿಮಾನದ ಮೂಲಕ ಮುಂಬೈಗೆ ಬಂದಿಳಿದಿದ್ದರು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿಂಧೆ ಅವರಿಗೆ ಸಣ್ಣ ಪಕ್ಷಗಳ 10 ಶಾಸಕರು ಮತ್ತು ಸ್ವತಂತ್ರ ಹಾಗೂ ಬಿಜೆಪಿಯ 106 ಶಾಸಕರ ಬೆಂಬಲವಿದೆ.
ವಿಧಾನಸಭೆಯಲ್ಲಿ ಪಕ್ಷದ ಸ್ಥಾನ ಇಂತಿದೆ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಈಗ ಶಿವಸೇನೆ 55, ಎನ್‌ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ ಪಕ್ಷ 2, ಎಐಎಂಐಎಂ 2, ಪ್ರಹಾರ್ ಜನಶಕ್ತಿ ಪಕ್ಷ 2, ಎಂಎನ್‌ಎಸ್ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1 , ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1, ಮತ್ತು ಸ್ವತಂತ್ರ ಶಾಸಕರು 13 ಮಂದಿ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


