ದೇಶ

ಮಣಿಪುರ ಭೂಕುಸಿತ: ಮತ್ತೆ ಮೂರು ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ 37ಕ್ಕೆ ಏರಿಕೆ

ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಭಾನಿವಾರ ಹೊರ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು...

ಮಣಿಪುರ ಭೂಕುಸಿತ: ಮತ್ತೆ ಮೂರು ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ 37ಕ್ಕೆ ಏರಿಕೆ
ಮಣಿಪುರದಲ್ಲಿ ಭೂಕುಸಿತ
Published On :

ಗುವಾಹಟಿ: ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಭಾನಿವಾರ ಹೊರ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಟೆರಿಟೋರಿಯಲ್ ಆರ್ಮಿ ಜವಾನ ಸೇರಿದಂತೆ ಮೂವರ ಮೃತದೇಹಗಳು ಪತ್ತೆಯಾಗಿವೆ. ಜೂನ್ 29 ರ ರಾತ್ರಿ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಶಿಬಿರದಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ 26 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಪ್ರತಿಕೂಲ ಹವಾಮಾನ ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೋನಿ ಜಿಲ್ಲೆಯ ತುಪುಲ್‌ನಲ್ಲಿ ರೈಲ್ವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಾಗ ಗುರುವಾರ ಬೆಳಗಿನ ಜಾವ ಸಂಭವಿಸಿದ್ದ ಈ ದುರಂತ ಸ್ಥಳದಲ್ಲಿ ಸುಮಾರು 81 ಜನ ಇದ್ದರು ಎನ್ನಲಾಗಿದೆ. 

ಇದಕ್ಕೂ ಮುನ್ನ 13 ಸಿಬ್ಬಂದಿ ಸೇರಿದಂತೆ 18 ಮಂದಿಯನ್ನು ರಕ್ಷಿಸಲಾಗಿತ್ತು. ಶನಿವಾರ ರಾತ್ರಿ ಭಾರೀ ಮಳೆ ಮತ್ತು ತಾಜಾ ಭೂಕುಸಿತದಿಂದಾಗಿ ಪ್ರತಿಕೂಲ ಹವಾಮಾನದ ಹೊರತಾಗಿಯೂ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೇರಿದಂತೆ ಹಲವು ಸಂಸ್ಥೆಗಳು ನಾಪತ್ತೆಯಾದ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿವೆ.

ಶನಿವಾರ ಪತ್ತೆಯಾದ ಎಂಟು ಮೃತದೇಹಗಳಲ್ಲಿ ಐವರು ಟೆರಿಟೋರಿಯಲ್ ಆರ್ಮಿ ಸಿಬ್ಬಂದಿ ಮತ್ತು ಒಬ್ಬರು ನಿರ್ಮಾಣ ಕಂಪನಿಯ ಉದ್ಯೋಗಿಯಾಗಿದ್ದಾರೆ. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ತುಪುಲ್‌ನ ಭೂಕುಸಿತ ಪ್ರದೇಶದಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ.  ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.