ದೆಹಲಿ ಶಾಸಕರ ವೇತನ ಶೇ.66 ರಷ್ಟು ಹೆಚ್ಚಳ, ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ದೇಶದಲ್ಲಿ ಅತ್ಯಂತ ಕಡಿಮೆ ಸಂಭಾವನೆ ಪಡೆಯುವ ಶಾಸಕರಲ್ಲಿ ಒಬ್ಬರಾಗಿದ್ದ ದೆಹಲಿ ಶಾಸಕರ ವೇತನ ಮತ್ತು ಭತ್ಯೆಗಳನ್ನು ಶೇಕಡಾ 66 ರಷ್ಟು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಮಸೂದೆಗಳನ್ನು ದೆಹಲಿ ವಿಧಾನಸಭೆಯಲ್ಲಿ...

ನವದೆಹಲಿ: ದೇಶದಲ್ಲಿ ಅತ್ಯಂತ ಕಡಿಮೆ ಸಂಭಾವನೆ ಪಡೆಯುವ ಶಾಸಕರಲ್ಲಿ ಒಬ್ಬರಾಗಿದ್ದ ದೆಹಲಿ ಶಾಸಕರ ವೇತನ ಮತ್ತು ಭತ್ಯೆಗಳನ್ನು ಶೇಕಡಾ 66 ರಷ್ಟು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಮಸೂದೆಗಳನ್ನು ದೆಹಲಿ ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಿದೆ.
ಸಚಿವರು, ಶಾಸಕರು, ಮುಖ್ಯ ಸಚೇತಕ, ಸ್ಪೀಕರ್ ಮತ್ತು ಉಪಸಭಾಪತಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರ ವೇತನ ಹೆಚ್ಚಳಕ್ಕಾಗಿ ಐದು ವಿಭಿನ್ನ ಮಸೂದೆಗಳನ್ನು ಇಂದು ಮಂಡಿಸಲಾಯಿತು. ಬಳಿಕ ಅವುಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಬೆಲೆ ಏರಿಕೆ ಹಾಗೂ ಶಾಸಕರು ಮಾಡಿರುವ ಕೆಲಸಗಳಿಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಎಲ್ಲಾ ಸದಸ್ಯರು ಒತ್ತಾಯಿಸಿದರು.
ಹಣಕಾಸು ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, "ಪ್ರತಿಭಾವಂತರನ್ನು ರಾಜಕೀಯಕ್ಕೆ ಆಹ್ವಾನಿಸಲು, ಪ್ರತಿಫಲ ಇರಬೇಕು. ಕಾರ್ಪೊರೇಟ್ ಕಂಪನಿಗಳು ಸಂಬಳದ ಕಾರಣದಿಂದ ಪ್ರತಿಭಾವಂತ ಜನರನ್ನು ಪಡೆಯುತ್ತವೆ" ಎಂದು ಹೇಳಿದರು.
ಬಿಜೆಪಿ ಶಾಸಕ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮವೀರ್ ಸಿಂಗ್ ಬಿಧುರಿ ಅವರು ಸಹ ವೇತನ ಹೆಚ್ಚಳವನ್ನು ಬೆಂಬಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


