ಬಿಜೆಪಿ ಪಕ್ಷಕ್ಕಾಗಿ ದುಡಿಯುತ್ತೇನೆ: ನಟ ಮಿಥುನ್ ಚಕ್ರವರ್ತಿ
ಕಳೆದ ವರ್ಷದ ವಿಧಾನಸಭಾ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ನಟ ಕಾಮ್ ರಾಜಕಾರಣಿ ಮಿಥುನ್ ಚಕ್ರವರ್ತಿ ಪಕ್ಷಕ್ಕಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಕೋಲ್ಕತ್ತಾ: ಕಳೆದ ವರ್ಷದ ವಿಧಾನಸಭಾ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ನಟ ಕಮ್ ರಾಜಕಾರಣಿ ಮಿಥುನ್ ಚಕ್ರವರ್ತಿ ಪಕ್ಷಕ್ಕಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಮಿಥುನ್ ಚಕ್ರವರ್ತಿ ಕಳೆದ ವರ್ಷ ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆಗೂ ಕೆಲವೇ ದಿನಗಳ ಮೊದಲು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರು ಚುನಾವಣೆಗೆ ಸ್ಪರ್ಧಿಸದಿದ್ದರೂ, ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಆದರೆ, ಚುನಾವಣೆ ಬಳಿಕ ಚಕ್ರವರ್ತಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು.
ಕಳೆದ ವರ್ಷದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಲು ಮತ್ತು ಪಕ್ಷದ ಕಚೇರಿಗೆ ಬರಲು ಸಾಧ್ಯವಾಗಲಿಲ್ಲ, ಪಕ್ಷವು ನನಗೆ ಕೆಲವು ಕಾರ್ಯಗಳನ್ನು ನೀಡಿದೆ ಮತ್ತು ಆ ಕರ್ತವ್ಯಗಳನ್ನು ಪೂರೈಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ನಾನು ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಪಕ್ಷವಿದೆ ಎಂದು ಚಕ್ರವರ್ತಿ ಸುದ್ದಿಗಾರರಿಗೆ ತಿಳಿಸಿದರು.
ಹಿಂದುಳಿದವರಿಗಾಗಿ ದುಡಿಯಬೇಕೆಂಬ ಆಸೆ ಸದಾ ಹೊಂದಿದ್ದು, ಅವರ ಆಶಯ ಈಡೇರಿಸಲು ಕೇಸರಿ ಪಾಳಯ ವೇದಿಕೆ ಕಲ್ಪಿಸಿದೆ ಎಂದರು. ರಾಜ್ಯದ ಜನರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಬಯಸುತ್ತೇನೆ, ನನಗೆ ಬಂಗಾಳ ಮೊದಲ ಸ್ಥಾನದಲ್ಲಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


