ಹಣ ವರ್ಗಾವಣೆ ಪ್ರಕರಣ: ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ದಾಳಿ!
ದೇಶಾದ್ಯಂತ ಹಲವು ಪ್ರದೆಶಗಳಲ್ಲಿ ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ನವದೆಹಲಿ: ದೇಶಾದ್ಯಂತ ಹಲವು ಪ್ರದೆಶಗಳಲ್ಲಿ ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಹಾಗೂ ದಕ್ಷಿಣದ ರಾಜ್ಯಗಳೂ ಸೇರಿದಂತೆ ಚೀನಾ ಕಂಪನಿ ಹಾಗೂ ವೀವೋಗೆ ಸಂಬಂಧಿಸಿದ ಸುಮಾರು 40 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆದಿದೆ.
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಾಳಿ ನಡೆದಿದ್ದು, ದಾಳಿಯ ಕುರಿತಾಗಿ ವೀವೋ ಈ ವರೆಗೂ ಯಾವ ಪ್ರತಿಕ್ರಿಯೆಯನ್ನೂ ನೀಡಿಲ್ಲ.
ಸಿಬಿಐ ಸಹ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ
ಏಪ್ರಿಲ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಭಾರತದ ಷಿಯೋಮಿ ಟೆಕ್ನಾಲಜಿ ಲಿಮಿಟೆಡ್ ಗೆ ಸೇರಿದ್ದ 5,551.27 ಕೋಟಿ ರೂಪಾಯಿ ಮೊತ್ತವನ್ನು ಬ್ಯಾಂಕ್ ಖಾತೆಗಳಿಂದ ಎಫ್ಇಎಂಎಯ ನಿಬಂಧನೆಗಳಡಿಯಲ್ಲಿ ವಶಪಡಿಸಿಕೊಂಡಿತ್ತು. ಇದಕ್ಕೂ ಮುನ್ನ ಕಂಪನಿಯ ವಿರುದ್ಧ ಅಕ್ರಮ ಬಾಹ್ಯ ಹಣ ರವಾನೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಂಸ್ಥೆ ನಾವು ಸರ್ಕಾರದ ಆದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ್ದು, ನಮ್ಮ ಗೌರವಧನದ ಪಾವತಿಗಳು ಹಾಗೂ ಬ್ಯಾಂಕ್ ಸ್ಟೇಟ್ಮೆಂಟ್ ಗಳು ಸತ್ಯವಾಗಿ, ಕಾನೂನುಬದ್ಧವಾಗಿಯೇ ಇವೆ ಎಂದು ನಂಬುತ್ತೇವೆ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


