ಜಾರ್ಖಂಡ್: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ
ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಖುಂಟಿ: ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿ ವಿರುದ್ಧ ಖುಂಟಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ 2019 ರ ಬ್ಯಾಚ್ನ ಅಧಿಕಾರಿಯನ್ನು ಸೋಮವಾರ ರಾತ್ರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಹೇಳಿದ್ದಾರೆ.
ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಮತ್ತು 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಮಾತು, ಹಾವಭಾವ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತ್ರಸ್ತ ವಿದ್ಯಾರ್ಥಿನಿ ಸೇರಿದಂತೆ ಹೊರರಾಜ್ಯದ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಬೇತಿಗಾಗಿ ಖುಂಟಿಯಲ್ಲಿದ್ದರು ಎಂದು ಕುಮಾರ್ ತಿಳಿಸಿದ್ದಾರೆ.
ಇದನ್ನು ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಹಲವು ಎಫ್ಐಆರ್ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕಳೆದ ಶನಿವಾರ ಡೆಪ್ಯುಟಿ ಡೆವಲಪ್ಮೆಂಟ್ ಕಮಿಷನರ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಈ ಘಟನೆ ನಡೆದಿದೆ. ಪಾರ್ಟಿಯಲ್ಲಿ, ಐಎಎಸ್ ಅಧಿಕಾರಿ, ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯ ಬಳಿಗೆ ತೆರಳಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಧಿಕಾರಿ ಮತ್ತು ಪಾರ್ಟಿಯಲ್ಲಿ ಭಾಗವಹಿಸಿದ್ದ ಕೆಲವು ಅತಿಥಿಗಳನ್ನು ವಿಚಾರಣೆಗೆ ಒಳಪಡಿಸಿದ ನಂತರ ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡುಬಂದಿದೆ. ಸದ್ಯ ವಿದ್ಯಾರ್ಥಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದ ಅಮನ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


