ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್ ಠಾಕ್ರೆಗೆ ಶಿವಸೇನಾ ಸಂಸದ ಒತ್ತಾಯ
ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.

ಮುಂಬೈ: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.
ಉದ್ಧವ್ ಠಾಕ್ರೆಗೆ ಪತ್ರ ಬರೆದಿರುವ ರಾಹುಲ್ ಶೆವಾಲೆ, ದ್ರೌಪದಿ ಮುರ್ಮು ಅವರ ಬುಡಕಟ್ಟು ಸಮುದಾಯದ ಹಿನ್ನೆಲೆ ಹಾಗೂ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಅವರಿಗೆ ಬೆಂಬಲ ನೀಡಲು ಘೋಷಿಸಬೇಕು ಮತ್ತು ಶಿವಸೇನಾ ಸಂಸದರು ಅದೇ ರೀತಿ ಮಾಡುವಂತೆ ನಿರ್ದೇಶನ ನೀಡಬೇಕು ಎಂದಿದ್ದಾರೆ.
ಕಳೆದ ವಾರ ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ್ ಆಘಾದಿ ಸರ್ಕಾರ ಪತನ ನಂತರ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ ಬಿಜೆಪಿ ವಿರುದ್ಧ ತಿರುಗಿ ಬಿದಿದ್ದು, ವಾಕ್ ಪ್ರಹಾರ ನಡೆಸುತ್ತಿದೆ.
ಇಂತಹ ಸಂದರ್ಭದಲ್ಲಿ ರಾಹುಲ್ ಶೆವಾಲ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಯಾರನ್ನು ಬೆಂಬಲಿಸಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಶಿವಸೇನೆ ಲೋಕಸಭೆಯಲ್ಲಿ 18 ಸದಸ್ಯರು ಹಾಗೂ ರಾಜ್ಯಸಭೆಯಲ್ಲಿ ಮೂವರು ಸದಸ್ಯರನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


