ದೇಶ

ಉದಯಪುರ ಟೈಲರ್ ಹತ್ಯೆ: ಮತ್ತೊಬ್ಬ ಆರೋಪಿಯನ್ನು ಜುಲೈ 12ರವರೆಗೆ ಎನ್‌ಐಎ ವಶಕ್ಕೆ ನೀಡಿದ ಕೋರ್ಟ್

ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮತ್ತೊಬ್ಬ ಆರೋಪಿಯನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿ ಎನ್‌ಐಎ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಉದಯಪುರ ಟೈಲರ್ ಹತ್ಯೆ: ಮತ್ತೊಬ್ಬ ಆರೋಪಿಯನ್ನು ಜುಲೈ 12ರವರೆಗೆ ಎನ್‌ಐಎ ವಶಕ್ಕೆ ನೀಡಿದ ಕೋರ್ಟ್
ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ
Published On :

ಜೈಪುರ: ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮತ್ತೊಬ್ಬ ಆರೋಪಿಯನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿ ಎನ್‌ಐಎ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಆರೋಪಿ ಮೊಹಮ್ಮದ್ ಮೊಹ್ಸಿನ್‌ನನ್ನು ಬಿಗಿ ಭದ್ರತೆಯ ನಡುವೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯವು ಮೊಹಮ್ಮದ್ ಮೊಹ್ಸಿನ್ ನನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಟಿಪಿ ಶರ್ಮಾ ತಿಳಿಸಿದ್ದಾರೆ.

ಕನ್ಹಯ್ಯಾ ಲಾಲ್‌ ಅವರನ್ನು ಕೊಲ್ಲುವ ಸಂಚು ಮತ್ತು ಅವರ ಅಂಗಡಿಯ ವಿಚಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕಾಗಿ ಮೊಹ್ಸಿನ್‌ನನ್ನು ಸೋಮವಾರ ಬಂಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.