ಹಿಮಾಚಲ ಪ್ರದೇಶದ ಕುಲುನಲ್ಲಿ ಮೇಘಸ್ಫೋಟ: ಹಲವರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ, ಪಾರ್ವತಿ ನದಿ ಸೇತುವೆಗೆ ಹಾನಿ
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪಾರ್ವತಿ ಕಣಿವೆಯ ಚೋಜ್ ನುಲ್ಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಹಲವಾರು ಜನರು ಕೊಚ್ಚಿಹೋಗಿದ್ದಾರೆ.

ಕುಲು: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪಾರ್ವತಿ ಕಣಿವೆಯ ಚೋಜ್ ನುಲ್ಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಹಲವಾರು ಜನರು ಕೊಚ್ಚಿಹೋಗಿದ್ದಾರೆ. ಈ ಘಟನೆಯು ಆಸ್ತಿಗಳಿಗೆ ಸಾಕಷ್ಟು ಹಾನಿಯನ್ನುಂಟುಮಾಡಿದೆ ಮತ್ತು ಗ್ರಾಮಕ್ಕೆ ಹೋಗುವ ಪಾರ್ವತಿ ನದಿಗೆ ಅಡ್ಡಲಾಗಿರುವ ಏಕೈಕ ಸೇತುವೆಯನ್ನು ಸಹ ನಾಶಪಡಿಸಿದೆ.
ಭಾರೀ ಮಳೆಯಿಂದಾಗಿ ಕುಲು ಜಿಲ್ಲೆಯ ಮಣಿಕರನ್ ಕಣಿವೆಯಲ್ಲಿ ಪ್ರವಾಹ ಅಪ್ಪಳಿಸಿತು, ಚೋಜ್ ಗ್ರಾಮದಲ್ಲಿ ಡಜನ್ ಗಟ್ಟಲೆ ಮನೆಗಳು ಮತ್ತು ಕ್ಯಾಂಪಿಂಗ್ ಸೈಟ್‌ಗಳಿಗೆ ಹಾನಿಯಾಗಿದೆ ಎಂದು ಕುಲು ಪೊಲೀಸ್ ಅಧೀಕ್ಷಕ ಗುರುದೇವ್ ಶರ್ಮಾ ಹೇಳಿದ್ದಾರೆ.
ಪ್ರವಾಹದಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳದಲ್ಲಿವೆ ಎಂದು ತಿಳಿಸಿದ್ದಾರೆ. ಚೋಜ್ ಗ್ರಾಮದಲ್ಲಿ, 4ರಿಂದ 6 ವ್ಯಕ್ತಿಗಳು ಮತ್ತು 5 ಜಾನುವಾರುಗಳು ಕೊಚ್ಚಿಹೋಗಿವೆ. ಕಸೋಲ್-ಜೈಮಾಲಾ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ತಿಳಿಸಿದೆ.
ಕುಲುವಿನ ಮಲಾನಾ ಪ್ರಾಜೆಕ್ಟ್ ಮತ್ತು ತಹಸಿಲ್ ಭುಂತರ್‌ನಲ್ಲಿ ಕಟ್ಟಡಕ್ಕೆ ಹಾನಿಯಾಗಿದೆ. ಘಟನೆಯಲ್ಲಿ 25 ರಿಂದ 30 ನೌಕರರು ಸಿಲುಕಿಕೊಂಡಿದ್ದರು. ಇದೀಗ ಅವರನ್ನು ರಕ್ಷಿಸಲಾಗಿದೆ. ಎಸ್‌ಡಿಎಂ ಕುಲು, ಪೊಲೀಸರು ಮತ್ತು ಅಗ್ನಿಶಾಮಕ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ನಿನ್ನೆ ತಡರಾತ್ರಿಯಿಂದ ಶಿಮ್ಲಾದಲ್ಲಿ ನಿರಂತರ ಭಾರೀ ಮಳೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


