ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೊಣೆ
ಕೇಂದ್ರ ಸಚಿವರಾದ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ನವದೆಹಲಿ: ಕೇಂದ್ರ ಸಚಿವರಾದ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನಖ್ವಿ ಮತ್ತು ಉಕ್ಕು ಸಚಿವ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದರು.
ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ, ಕ್ಯಾಬಿನೆಟ್ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರಿಗೆ ಈಗಿರುವ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಿಕೊಳ್ಳಲು ರಾಷ್ಟ್ರಪತಿಗಳು ಸೂಚಿಸಿದ್ದಾರೆ.
ಕ್ಯಾಬಿನೆಟ್ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈಗಿರುವ ಖಾತೆಗೆ ಹೆಚ್ಚುವರಿಯಾಗಿ ಉಕ್ಕು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


