ನಟ ವಿಜಯ್ ಬಾಬು ನಿರೀಕ್ಷಣಾ ಜಾಮೀನು ರದ್ಧತಿಗೆ 'ಸುಪ್ರೀಂ' ನಕಾರ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.

ನವದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನ್ಯಾಯಾಲಯವು ಕೇರಳ ಹೈಕೋರ್ಟ್ ಆದೇಶ ವಿಚಾರಣೆಯ ಭಾಗವನ್ನು ಮಾರ್ಪಡಿಸಿ ಅಗತ್ಯವಿದ್ದರೆ ಜುಲೈ 3, 2022 ರ ನಂತರ ನಟನನ್ನು ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಿದೆ. ಜೂನ್ 27 ರಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದಾಗ ವಿಜಯ್ ಬಾಬು ಅವರನ್ನು ಬಂಧಿಸಲಾಯಿತು.
ಜೂನ್ 22 ರಂದು ವಿಜಯ್ ಬಾಬುಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
ನಟಿಯೊಬ್ಬರು ಚಲನಚಿತ್ರ ಪಾತ್ರಗಳನ್ನು ನೀಡುವುದಾಗಿ ನಂಬಿಸಿ ತನ್ನನ್ನು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿದ್ದರು. ಇನ್ನು ವಿಜಯ್ ಬಾಬು ಅವರು ಮಹಿಳೆಯ ಗುರುತನ್ನು ಬಹಿರಂಗಪಡಿಸಿದ್ದರು. ಈ ಪ್ರಕರಣವು ಸಹ ಅವರ ಮೇಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


