ಲೋಕಸಭೆಯಲ್ಲೂ ಟೀಂ ಠಾಕ್ರೆ v/s ಟೀಂ ಶಿಂಧೆ, ಹೊಸ ಮುಖ್ಯ ಸಚೇತಕರ ನೇಮಕ
ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಅಲ್ಪಮತಕ್ಕೆ ಇಳಿದಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಪಕ್ಷದ ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಹೊಸ ಮುಖ್ಯ ಸಚೇತಕರನ್ನು ನೇಮಿಸಿದೆ.

ನವದೆಹಲಿ: ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಅಲ್ಪಮತಕ್ಕೆ ಇಳಿದಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಪಕ್ಷದ ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಹೊಸ ಮುಖ್ಯ ಸಚೇತಕರನ್ನು ನೇಮಿಸಿದೆ.
ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರು ಇಂದು ಲೋಕಸಭೆ ಸ್ಪೀಕರ್ ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ 19 ಮತ್ತು ರಾಜ್ಯಸಭೆಯಲ್ಲಿ ಮೂರು ಸದಸ್ಯರನ್ನು ಹೊಂದಿರುವ ಶಿವಸೇನೆಗೆ ಶಾಸಕರ ಬೆನ್ನಲ್ಲೇ ಸಂಸದರ ನಡುವೆ ಬಂಡಾಯವೇಳುವ ಭೀತಿ ಶುರುವಾಗಿದೆ.
ಕಳೆದ ತಿಂಗಳು ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ 55 ಶಾಸಕರ ಪೈಕಿ 40 ಶಾಸಕರನ್ನು ಕಳೆದುಕೊಂಡು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡರು. ಈ ವಾರದ ಆರಂಭದಲ್ಲಿ ವಿಧಾನಸಭೆಯಲ್ಲಿ ನಡೆದೆ ಬಹುಮತ ಸಾಬೀತು ಪರೀಕ್ಷೆಯಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ಬಣ 164 ಮತಗಳನ್ನು ಪಡೆದರು.ಕೇವಲ 99 ಶಾಸಕರು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದರು.
ಹೊಸ ಮೈತ್ರಿಕೂಟ ಈಗಾಗಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸ್ಪೀಕರ್ ಮತ್ತು ಮುಖ್ಯ ಸಚೇತಕರನ್ನು ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತದ ವೇಳೆ ವಿಪ್ ಧಿಕ್ಕರಿಸಿದ ರಾಕ್ರೆ ತಂಡದ ಶಾಸಕರನ್ನು ಅನರ್ಹಗೊಳಿಸುವಂತೆಯೂ ಮನವಿ ಮಾಡಿದ್ದಾರೆ.
ಮೂರನೇ ಎರಡರಷ್ಟು ಬಹಮತದ ಆಧಾರದ ಮೇಲೆ ತಮ್ಮ ಬಣವೇ ನಿಜವಾದ ಶಿವಸೇನೆ ಎಂದು ಶಿಂಧೆ ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಮೊದಲು ಹಕ್ಕಿ ಮಂಡಿಸಿದ ಅವರು ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರಯತ್ನಿಸುತ್ತಿರುವ ಹತಾಶ ಅಲ್ಪಸಂಖ್ಯಾತರ ನಾಯಕ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


