ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಎಂಡಿ ಸತೀಶ್ ಅಗ್ನಿಹೋತ್ರಿ ವಜಾ: ಕೇಂದ್ರ ಸರ್ಕಾರ ಆದೇಶ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಎಂಡಿ ‘ಸತೀಶ್ ಅಗ್ನಿಹೋತ್ರಿ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಎಂಡಿ ‘ಸತೀಶ್ ಅಗ್ನಿಹೋತ್ರಿ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಒಂದು ವರ್ಷದ ಹಿಂದೆ ವಿಶೇಷ ಪ್ರಕರಣ ಮತ್ತು ಔಟ್-ಆಫ್-ಟರ್ನ್ ಆಧಾರದ ಮೇಲೆ ಹುದ್ದೆಗೆ ನೇಮಕಗೊಂಡಿದ್ದ ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ಗುರುವಾರ ವಜಾಗೊಳಿಸಿದೆ.
“ಸತೀಶ್ ಅಗ್ನಿಹೋತ್ರಿ ಅವರ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದ್ದು, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವಂತೆ ನಿರ್ದೇಶಿಸಲಾಗಿದೆ” ಎಂದು NHSRCL ಕಂಪನಿ ಕಾರ್ಯದರ್ಶಿಗೆ ಜುಲೈ 7ರಂದು ರೈಲ್ವೆ ಮಂಡಳಿ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
ಪ್ರಸ್ತುತ NHSRCLನಲ್ಲಿ ನಿರ್ದೇಶಕರಾಗಿ (ಯೋಜನೆಗಳು) ಅಧಿಕಾರದಲ್ಲಿರುವ ರಾಜೇಂದ್ರ ಪ್ರಸಾದ್ ಅವರಿಗೆ “ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ - ಯಾವುದು ಮೊದಲೋ ಅದು) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳಲು ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಗ್ನಿಹೋತ್ರಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988 ರ ಅಡಿಯಲ್ಲಿ ಯಾವುದೇ ಅಪರಾಧವನ್ನು ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತು ಆರು ತಿಂಗಳೊಳಗೆ ಅಥವಾ ಡಿಸೆಂಬರ್ 12, 2022 ರೊಳಗೆ ತನಿಖಾ ವರದಿಯನ್ನು ಲೋಕಪಾಲ್ ಕಚೇರಿಗೆ ಸಲ್ಲಿಸುವಂತೆ ಲೋಕಪಾಲ್ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


