ದೇಶ

ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ವಹಿಸಿಕೊಂಡ ಸ್ಮೃತಿ ಇರಾನಿ

ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ...

ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ವಹಿಸಿಕೊಂಡ ಸ್ಮೃತಿ ಇರಾನಿ
ಸ್ಮೃತಿ ಇರಾನಿ - ಮುಖ್ತಾರ್ ಅಬ್ಬಾಸ್ ನಖ್ವಿ
Published On :

ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ಗುರುವಾರ ವಹಿಸಿಕೊಂಡರು.

ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೊಂದಿದ್ದ ನಖ್ವಿ ಅವರು ನಿನ್ನೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೊಂದಿದ್ದ ಖಾತೆಯನ್ನು ಹೆಚ್ಚುವರಿಯಾಗಿ ಸ್ಮೃತಿ ಇರಾನಿ ಅವರಿಗೆ ನೀಡಲಾಗಿದೆ.

ತಾವು ಹೊಂದಿದ್ದ ಖಾತೆಯನ್ನು ವಹಿಸಿಕೊಂಡ ಸ್ಮೃತಿ ಇರಾನಿ ಅವರಿಗೆ ಮಾಜಿ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಶುಭ ಕೋರಿದ್ದು, "ನಿಮ್ಮ ಶಕ್ತಿಯುತ ಮತ್ತು ಕ್ರಿಯಾತ್ಮಕ ನಾಯಕತ್ವವು ಎಲ್ಲಾ ವಿಭಾಗಗಳ 'ಗೌರವದೊಂದಿಗೆ ಅಭಿವೃದ್ಧಿಗಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ಇರಾನಿ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.