ಖಾದ್ಯ ತೈಲ ದರದಲ್ಲಿ 15 ರೂ. ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!
ಖಾದ್ಯ ತೈಲ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದ ರಿಲೀಫ್ ನೀಡಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಡುಗೆ ಎಣ್ಣೆಗಳ ದರದಲ್ಲಿ ಪ್ರತಿ ಲೀಟರ್ಗೆ 15 ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಖಾದ್ಯ ತೈಲ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದ ರಿಲೀಫ್ ನೀಡಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಡುಗೆ ಎಣ್ಣೆಗಳ ದರದಲ್ಲಿ ಪ್ರತಿ ಲೀಟರ್ಗೆ 15 ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ನಿರ್ದೇಶನ ಹೊರಡಿಸಿದ್ದು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಖಾದ್ಯ ತೈಲಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ (MRP) 15 ರೂಪಾಯಿಗಳ ಕಡಿತವನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಖಾದ್ಯ ತೈಲ ಸಂಘಗಳಿಗೆ ನಿರ್ದೇಶನ ನೀಡಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.
ಅಂತೆಯೇ ಈ ಆದೇಶವು ಈ ಕ್ಷಣದಿಂದಲೇ ಜಾರಿಗೆ ಬರಬೇಕೆಂದು ಖಾದ್ಯ ತೈಲ ಸಂಘಗಳಿಗೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


