ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಸುಪ್ರೀಂ ಕೋರ್ಟ್ ಜಾಮೀನು: ಕೇಂದ್ರ ಸರ್ಕಾರಕ್ಕೆ ನೊಟೀಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಿಬಿಟ್ಟಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಟಿವಿ ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಜಾಮೀನು ನೀಡಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಿಬಿಟ್ಟಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ (News anchor Rohit Ranjan) ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳು ರೋಹಿತ್ ರಂಜನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ನ್ಯಾ.ಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ ಕೆ ಮಹೇಶ್ವರಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ ರಜಾಪೀಠ ರೋಹಿತ್ ರಂಜನ್ ಅರ್ಜಿಗೆ ಸಂಬಂಧಪಟ್ಟಂತೆ ಅಟೊರ್ನಿ ಜನರಲ್ ಮೂಲಕ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ರೋಹಿತ್ ರಂಜನ್ ಪರ ವಾದಿಸಿದ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರ, ಒಂದೇ ಆರೋಪಕ್ಕೆ ಸಂಬಂಧಪಟ್ಟಂತೆ ಹಲವು ಎಫ್ಐಆರ್ ಗಳು ದಾಖಲಾಗಿವೆ. ಒಂದೇ ಕೇಸಿಗೆ ಸಂಬಂಧಿಸಿ ಹಲವು ಎಫ್ಐಆರ್ ಗಳು ದಾಖಲಾಗಿರುವುದರಿಂದ ತಪ್ಪಾಗಿದ್ದು ಒಂದೇ ಕೇಸಿನಲ್ಲಿ ಹಲವು ಠಾಣೆಗಳ ಪೊಲೀಸರು ಬಂಧಿಸುವ ಸಾಧ್ಯತೆಯಿದೆ ಎಂದು ವಾದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


