ದೇಶ

2 ನೇ ಟಿ20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 49 ರನ್ ಗಳ ಜಯ! 

ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ 2 ನೇ ಟಿ20 ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡದ ವಿರುದ್ಧ 49 ರನ್ ಗಳ ಜಯ ಗಳಿಸಿದೆ.

2 ನೇ ಟಿ20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 49 ರನ್ ಗಳ ಜಯ! 
ಭಾರತ- ಇಂಗ್ಲೆಂಡ್ ವಿರುದ್ಧ 2 ನೇ ಟಿ20
Published On :

ಬರ್ಮಿಂಗ್ಹ್ಯಾಮ್: ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ 2 ನೇ ಟಿ20 ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡದ ವಿರುದ್ಧ 49 ರನ್ ಗಳ ಜಯ ಗಳಿಸಿದೆ. 

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವನ್ನು ಸಮರ್ಥವಾಗಿ ಎದುರಿಸಿದ ಭಾರತದ ಬ್ಯಾಟ್ಸ್ಮನ್ ಗಳು ಇಂಗ್ಲೆಂಡ್ ತಂಡಕ್ಕೆ 171 ರನ್ ಗಳ ಗುರಿ ನೀಡಿತ್ತು. 

ಇಂಗ್ಲೆಂಡ್ ಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭಾರತದ ಬೌಲಿಂಗ್ ವಿಭಾಗ, ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಯಿತು. 

ಇಂಗ್ಲೆಂಡ್ ನ ಆರಂಭಿಕ ಆಟಗಾರರಾದ ಜೇಸನ್ ರಾಯ್, ಜೋಸ್ ಬಟ್ಲರ್, ವೈಫಲ್ಯದಿಂದ ಇಂಗ್ಲೆಂಡ್ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲೆ ಇಂಗ್ಲೆಂಡ್ ತಂಡದ ಪರ ಉತ್ತಮ ಸ್ಕೋರ್ ಗಳಿಸಲು ಯತ್ನಿಸಿದರಾದರೂ ಭಾರತದ ಬೌಲರ್ ಗಳ ಅಬ್ಬರದೆದುರು ಹೆಚ್ಚು ಸಮಯ ನಿಲ್ಲಲು ಸಾಧ್ಯವಾಗಲಿಲ್ಲ. ಪರಿಣಾಮ ಇಂಗ್ಲೆಂಡ್ ತಂಡ 17 ಓವರ್ ಗಳಿಗೆ 121 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಭುವನೇಶ್ವರ್ ಕುಮಾರ್ 1 ಮೇಡಿನ್ ಓವರ್, 15 ರನ್ ನೀಡಿ 3 ವಿಕೆಟ್ ಗಳಿಸುವ ಮೂಲಕ ಭಾರತದ ಪರ ಅತ್ಯುತ್ತಮ ಬೌಲರ್ ಎನಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.