ಉದಯಪುರ ಟೈಲರ್ ಹತ್ಯೆ ಪ್ರಕರಣ: ಏಳನೇ ಆರೋಪಿಯನ್ನು ಬಂಧಿಸಿದ ಎನ್ಐಎ
ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ 7ನೇ ಆರೋಪಿಯನ್ನು ಬಂಧಿಸಿದೆ.

ನವದೆಹಲಿ: ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ 7ನೇ ಆರೋಪಿಯನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಫರ್ಹಾದ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಎನ್ಐಎ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ ಶೇಖ್ ಅಲಿಯಾಸ್ ಬಬ್ಲಾನನ್ನು ಬಂಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಅವರು ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರಿಯಾಜ್ ಅಖ್ತಾರಿಯಾ ಆಪ್ತರಾಗಿದ್ದು, ಟೈಲರ್ ಹತ್ಯೆ ಪಿತೂರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಹೇಳಿದ್ದಾರೆ.
ಕಳೆದ ಜೂನ್ 28 ರಂದು ಟೈಲರ್ ಕನ್ಹಯ್ಯಾ ಲಾಲ್ ಬಳಿ ಬಟ್ಟೆ ಹೊಲಿಯಲು ಅಳತೆ ಕೊಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಚಾಕುವಿನಿಂದ ಶಿರಚ್ಚೇದ ಮಾಡಿದ ಕ್ರೂರ ದಾಳಿಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆಗಿದ್ದು, ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


