ದೇಶ

ದೇಶದಲ್ಲಿ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣ ಪತ್ತೆ, 26 ಸಾವು

ದೇಶದಲ್ಲಿ ಕೊರೋನಾ ಪ್ರಕರಣಗಳ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 26 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೇ 14,629 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣ ಪತ್ತೆ, 26 ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 26 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೇ 14,629 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 2,023 ಕೇಸ್ ಗಳು ಏರಿಕೆಯಾಗಿದ್ದು , ಒಟ್ಟಾರೇ ಗುಣಮುಖರಾದವರ ಸಂಖ್ಯೆ 4.29,83,162 ಆಗಿದೆ. ಚೇತರಿಕೆ ಪ್ರಮಾಣ ಶೇ. 98.5 ರಷ್ಟಿದೆ. ದೇಶದಲ್ಲಿ ಸದ್ಯ 1,30,713 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೇ ಸೋಂಕಿತರಲ್ಲಿ ಶೇ. 0.29 ರಷ್ಟು ಸಕ್ರಿಯ ಪ್ರಕರಣಗಳಿರುವುದಾಗಿ ಸಚಿವಾಲಯ ಹೇಳಿದೆ. 

26 ಸೋಂಕಿತರು ಸಾವನ್ನಪ್ಪುವುದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 5,25,454ಕ್ಕೆ ಏರಿಕೆಯಾಗಿದೆ. ಐಸಿಎಂಆರ್ ನಿನ್ನೆ  2,78,266 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ಮಾಡಲಾಗಿದ್ದು, ಒಟ್ಟಾರೇ,  86,68,88,980 ಸ್ಯಾಂಪಲ್ಸ್ ಗಳನ್ನು ಪರೀಕ್ಷಿಸಲಾಗಿದೆ. ಒಟ್ಟಾರೇ 198 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.