ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ 21ಕ್ಕೆ ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಇಡಿ ಹೊಸ ಸಮನ್ಸ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಈ ಮೂಲಕ ಹೆಚ್ಚಿನ ಕಾಲಾವಕಾಶ ಕೋರಿದ್ದ ಸೋನಿಯಾ ಗಾಂಧಿ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.
ಜೂನ್ 2ರಂದು ಕೋವಿಡ್ ದೃಢಪಟ್ಟ ನಂತರ 75 ವರ್ಷದ ಸೋನಿಯಾ ಗಾಂಧಿ ಇಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹಲವು ಬಾರಿ ಸಮನ್ಸ್ ನೀಡಿದರೂ ಕೋವಿಡ್ ಸೋಂಕು, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಏಜೆನ್ಸಿಯ ಮುಂದೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೇಳಿದ್ದರು.
ಸೋನಿಯಾ ಗಾಂಧಿಯವರ ಪುತ್ರ ರಾಹುಲ್ ಗಾಂಧಿ ಅವರು ಇದೇ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ಎದುರು ಐದು ದಿನಗಳ ಕಾಲ ಸರಣಿ ವಿಚಾರಣೆ ಎದುರಿಸ್ದಾರೆ. ಇದಕ್ಕೂ ಮುನ್ನ ಇಡಿ ತನಿಖೆಯ ಭಾಗವಾಗಿ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


