ಶ್ರೀನಗರ: ಭಯೋತ್ಪಾದಕರ ಗುಂಡಿನ ದಾಳಿ; ಓರ್ವ ಪೊಲೀಸ್ ಅಧಿಕಾರಿ ಹುತಾತ್ಮ, ಇಬ್ಬರಿಗೆ ಗಾಯ!
ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ದಾಳಿ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ದಾಳಿ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ದಾಳಿಕೋರರನ್ನು ಪತ್ತೆ ಹಚ್ಚಲು ಪ್ರದೇಶವನ್ನು ಸುತ್ತುವರಿದಿದ್ದಾರೆ. ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಾಲ್ ಬಜಾರ್‌ನಲ್ಲಿರುವ ಜಿಡಿ ಗೋಯೆಂಕಾ ಶಾಲೆಯ ಹೊರಗೆ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿಯನ್ನು ಹಿಮ್ಮೆಟ್ಟಿಸಿದರು ಆದರೆ ದಾಳಿಕೋರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ದಾಳಿ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ನಡುವೆ ಭದ್ರತೆಯು ಹೆಚ್ಚಿರುವಾಗ ಭಯೋತ್ಪಾದಕರ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


