ದೇಶ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಶಿವಸೇನೆ ಬೆಂಬಲ- ಉದ್ಧವ್ ಠಾಕ್ರೆ ಘೋಷಣೆ

ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಶಿವಸೇನೆ ಬೆಂಬಲ- ಉದ್ಧವ್ ಠಾಕ್ರೆ ಘೋಷಣೆ
ಉದ್ಧವ್ ಠಾಕ್ರೆ
Published On :

ಮುಂಬೈ: ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ  ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ, ಯಾವುದೇ ಒತ್ತಡವಿಲ್ಲದೆ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿರುವುದಾಗಿ ತಿಳಿಸಿದರು. ಶಿವಸೇನಾ ಸಂಸದರ ಸಭೆಯಲ್ಲಿ ಯಾರೂ ಕೂಡಾ ನನ್ನಗೆ ಒತ್ತಡ ಹಾಕಲಿಲ್ಲ ಎಂದು ಅವರು ಹೇಳಿದರು.

ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ  ಅವಕಾಶವಿರುವುದಾಗಿ ಪಕ್ಷದ ಬುಡಕಟ್ಟು ಮುಖಂಡರು ಹೇಳಿರುವುದಾಗಿ ತಿಳಿಸಿದರು. ಪ್ರಸ್ತುತ ನಡೆಯುತ್ತಿರುವ ರಾಜಕೀಯ ಪರಿಸ್ಥಿತಿಯಲ್ಲಿ ನಾನು ಮುರ್ಮು ಅವರನ್ನು ಬೆಂಬಲಸಬಾರದು. ಆದರೆ, ನಾವು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.